ಸಕಲೇಶಪುರ: ಸಕಲೇಶಪುರ ನಗರದ ಹಳೇ ಬಸ್ ನಿಲ್ದಾಣದಿಂದ ಎ.ಸಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಯಿತು.
ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಈ ಮೆರವಣಿಗೆಯಲ್ಲಿ ಪಾಲ್ಗೊಂಡು, ಧಾರ್ಮಿಕ ಕೇಂದ್ರ ಧರ್ಮಸ್ಥಳ ಮತ್ತು ಪೂಜ್ಯ ಶ್ರೀ ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ನಡೆದ ಷಡ್ಯಂತ್ರಗಳಿಂದ ಧಾರ್ಮಿಕ ಕೇಂದ್ರಕ್ಕೆ ಕಪ್ಪು ಮಸಿ ಬಳಿಯಲು ಯತ್ನಿಸುತ್ತಿರುವ ಎಲ್ಲಾ ಕುತಂತ್ರಿಗಳನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಕಲೇಶಪುರ ಮಂಡಲ ಭಾಜಪಾ ಅಧ್ಯಕ್ಷರು, ಪದಾಧಿಕಾರಿಗಳು, ಮೋರ್ಚಾಗಳ ಪ್ರಮುಖರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಶಾಸಕರು ಮತ್ತು ಭಾಗವಹಿಸಿದ ಸಂಘಟನೆಗಳು ಧರ್ಮದ ರಕ್ಷಣೆಯನ್ನು ಮುಂದಿನ ಮುಖ್ಯ ಗುರಿಯಾಗಿ ತಮ್ಮ ದೃಢ ನಿಶ್ಚಯವನ್ನು ವ್ಯಕ್ತಪಡಿಸಿದ್ದರು.
