ಹಾಸನದ ಹೇಮಾವತಿ ನಗರದಲ್ಲಿರುವ ಎಲೈಟ್ ಶಾಲೆಯಲ್ಲಿ ಶುಕ್ರವಾರದಂದು ಶಾಲಾ ವಿದ್ಯಾರ್ಥಿಗಳಿಗೋಸ್ಕರ ಸಂಗೀತ ನಿನಾದ -2026 ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಗಮಕ ವಿಧುಷಿಗಳಾದ ಶ್ರೀ ಗಣೇಶ ಉಡುಪ ರವರು ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದರು.
ಅವರು, ‘ಸಂಗೀತ ಧ್ಯಾನದ ಮೂಲಕ ಮನಸ್ಸನ್ನು ಕೇಂದ್ರೀಕರಿಸಲು ಹಾಗೂ ಸಂತೋಷ ನೀಡಲು ಸಹಕರಿಸುತ್ತದೆ. ವಿದ್ಯಾರ್ಥಿಗಳು ಹಾಡುಗಾರಿಕೆಯನ್ನು ಮೈಗೂಡಿಸಿಕೊಳ್ಳಬೇಕು. ಸಂಗೀತ ಕಾವ್ಯಗಳನ್ನು ಪಠಿಸಲು ಸುಲಲಿತ ಮಾಧ್ಯಮವಾಗಿದೆ’ ಎಂದರು. ಶ್ರೀಯುತರು ತಮ್ಮ ಅಮೂಲ್ಯ ಸಮಯವನ್ನು ಸ್ಪರ್ಧಾರ್ಥಿಗಳ ತೀರ್ಪುಗಾರಿಕೆಗಾಗಿ ಸದುಪಯೋಗಿಸಿದರು. ಮತ್ತೋರ್ವ ಅತಿಥಿಗಳಾಗಿ ಆಗಮಿಸಿದ ಗೊರೂರಿನ ಎ.ಎಲ್.ವಿ. ಕಾಲೇಜಿನ ನಿವೃತ್ತ ಪ್ರಾಧ್ಯಾಪಕರು ಹಾಗೂ ಗಮಕ ವಿದ್ವತ್ತೆ ಶ್ರೀಮತಿ ಅನುಸೂಯರವರು ತೀರ್ಪುಗಾರರಾಗಿ ಉಪಸ್ಥಿತರಿದ್ದರು.
ಸುಮಾರು 40 ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಗೀತೆಗಳನ್ನು ಹಾಡುವುದರ ಮೂಲಕ ಸ್ಪರ್ಧೆಯಲ್ಲಿ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತಾಧಿಕಾರಿಗಳು, ಪ್ರಾಂಶುಪಾಲರು, ಬೋಧಕ/ಬೋಧಕೇತರ ವರ್ಗದವರು, ಪೋಷಕರು ಮತ್ತು ವಿದ್ಯಾರ್ಥಿಗಳೆಲ್ಲರೂ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
