ತುಮಕೂರು:ನಗರದ ಶ್ರೀ ಸಿದ್ಧಗಂಗಾ ಕಲಾ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ನೂತನವಾಗಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕವನ್ನು ಕಾಲೇಜಿನಲ್ಲಿ ಡಾ.ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸಭಾಂಗಣದಲ್ಲಿ ಉದ್ಘಾಟಿಸಲಾಯಿತು,
ಕಾರ್ಯಕ್ರಮದಲ್ಲಿ ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿ ರೋವರ್ಸ್ ಮತ್ತು ರೇಂಜರ್ಸ್ ಘಟಕದ ರೇಂಜರ್ಸ್ ಲೀಡರ್ ಆದ ಮೋಹನ ಕುಮಾರಿ ಡಿ. ಎಂ, ರವರು ಸ್ವಾಗತಿಸಿದರು, ಶ್ರೀ ಸಿದ್ದಗಂಗಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಟಿ.ಕೆ.ನಂಜುಂಡಪ್ಪನವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶ್ರೀ ಸಿದ್ದಗಂಗಾ ಪದವಿ ಕಾಲೇಜುಗಳ ಸಹ ಸಂಯೋಜಕರಾದ ಡಿ. ಎನ್. ಯೋಗೀಶ್ವರಪ್ಪ, ಆಶಾ ಪ್ರಸನ್ನಕುಮಾರ್, ಜಿಲ್ಲಾ ಮುಖ್ಯ ಆಯುಕ್ತರು ಮತ್ತು ರಾಜ್ಯ ಉಪಾಧ್ಯಕ್ಷರು (ಗೈಡ್), ಸುರೇಂದ್ರ ಶಾ, ಜಿಲ್ಲಾ ಆಯುಕ್ತರು (ಸ್ಕೌಟ್), ಹಾಗೂ ಈಶ್ವರಯ್ಯ, ಜಿಲ್ಲಾ ಮುಖ್ಯ ಕಚೇರಿ ಆಯುಕ್ತರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ನವೀನ್ ಕುಮಾರ್ ಹೆಚ್ ಆರ್ ಅವರು ಭಾಗವಹಿಸಿ, ವಿದ್ಯಾರ್ಥಿಗಳಲ್ಲಿ ಶಿಸ್ತು, ನಾಯಕತ್ವ ಹಾಗೂ ಸಾಮಾಜಿಕ ಹೊಣೆಗಾರಿಕೆಯ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟಿ. ಬಿ. ನಿಜಲಿಂಗಪ್ಪ, ಪ್ರಾಂಶುಪಾಲರು ವಹಿಸಿ, ವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೋತ್ಸಾಹಿಸಿದರು.
ಶಿಕ್ಷಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಕೆಂಪರಾಜು ವಂದಿಸಿದರು, ಗೀತಾ.ಜಿ ನಿರೂಪಿಸಿದರು.
– ಕೆ.ಬಿ.ಚಂದ್ರಚೂಡ
