ಧರ್ಮಸ್ಥಳ: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆ, ಧರ್ಮಸ್ಥಳದ ವಿದ್ಯಾರ್ಥಿನಿಯರು 2026ರ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸಿ ಶಾಲೆಗೆ ಹೆಮ್ಮೆ ತಂದಿದ್ದಾರೆ. ಶೈಕ್ಷಣಿಕ ಸಾಧನೆಯ ಜೊತೆಗೆ ಸಹಪಾಠ್ಯ ಚಟುವಟಿಕೆಗಳಲ್ಲಿಯೂ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ.
ವಿದ್ಯಾರ್ಥಿನಿ ಜಿ ಮಾಧುರ್ಯ ಅವರು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 620 ಅಂಕಗಳನ್ನು ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಅವರು ಕೇವಲ ಶೈಕ್ಷಣಿಕ ಕ್ಷೇತ್ರದಲ್ಲೇ ಅಲ್ಲದೆ ಸಾಂಸ್ಕೃತಿಕ ಕ್ಷೇತ್ರದಲ್ಲಿಯೂ ಪ್ರತಿಭಾವಂತಳಾಗಿದ್ದು, ಉತ್ತಮ *ನೃತ್ಯಗಾತಿಯಾಗಿ ಗುರುತಿಸಿಕೊಂಡಿದ್ದಾರೆ. ಜೊತೆಗೆ ಅಕ್ಷರ ಜೋಡಣೆ, ಪ್ರಬಂಧ ರಚನೆ, ಕಥೆ ಹಾಗೂ ಕವನ ರಚನೆಯಲ್ಲಿ ವಿಶಿಷ್ಟ ಸಾಮರ್ಥ್ಯವನ್ನು ತೋರಿದ್ದಾರೆ.

ಇದೇ ಶಾಲೆಯ ಮತ್ತೊಂದು ವಿದ್ಯಾರ್ಥಿನಿ ಪೂರ್ವಿ ಭಟ್ ಕೆ ಅವರು ಕೂಡ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 620 ಅಂಕಗಳನ್ನು ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಅವರು ಉತ್ತಮ **ಭಾಷಣಗಾರ್ತಿ ಆಗಿದ್ದು, ಕಥೆ, ಕವನ ಹಾಗೂ ಪ್ರಬಂಧ ರಚನೆಯಲ್ಲಿ ಪ್ರತಿಭೆ ಹೊಂದಿದ್ದಾರೆ. ಜೊತೆಗೆ ಉತ್ತಮ ನೃತ್ಯಗಾತಿಯಾಗಿ ಹಾಗೂ ಗೈಡ್ಸ್ ವಿದ್ಯಾರ್ಥಿನಿಯಾಗಿ ಶಿಸ್ತಿನ ಮತ್ತು ನಾಯಕತ್ವ ಗುಣಗಳನ್ನು ಪ್ರದರ್ಶಿಸಿದ್ದಾರೆ.

ಈ ಇಬ್ಬರು ವಿದ್ಯಾರ್ಥಿನಿಯರ ಸಾಧನೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಗುಣಮಟ್ಟದ ಶಿಕ್ಷಣ ಮತ್ತು ಸಮಗ್ರ ಅಭಿವೃದ್ಧಿ ದೃಷ್ಟಿಕೋನದ ಪ್ರತಿಫಲವಾಗಿದೆ ಎಂದು ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರು ತಿಳಿಸಿದ್ದಾರೆ.
ವಿದ್ಯಾರ್ಥಿನಿಯರ ಈ ಸಾಧನೆ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದು, ಶಾಲೆಗೆ ಮತ್ತಷ್ಟು ಗೌರವವನ್ನು ತಂದಿದೆ.
