ಕೊರಟಗೆರೆ ;- ಅಂತರ ಕಾಲೇಜು ಮಹಿಳಾ ಖೋ-ಖೋ ಪಂದ್ಯಾವಳೀಯಲ್ಲಿ ಕೊರಟಗೆರೆ ಸರ್ಕಾರಿ ಪ್ರಥಮ ದರ್ಜೇ ಕಾಲೇಜು ವಿಧ್ಯಾರ್ಥಿನಿಯರು ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ಕೊರಟಗೆರೆ ಸರ್ಕಾರಿ ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಕಾಲೇಜು ಪ್ರಾಂಶುಪಾಲ ಈರಪ್ಪನಾಯಕ ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.
ತುಮಕೂರು ಸರ್ಕಾರಿ ಪ್ರಥಮ ದರ್ಜೇ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಅಂತರ ಕಾಲೇಜು ಖೋ-ಖೋ ಪಂದ್ಯಾವಳಿನಯಲ್ಲಿ ಕೊರಟಗೆರೆ ಸರ್ಕಾರಿ ಪ್ರಥಮ ದರ್ಜೇ ಕಾಲೇಜಿನ ವಿದ್ಯಾರ್ಥಿನಿಯರುಗಳು ಕೊರಟಗೆರೆ ತಾಲೂಕಿನ ಪರವಾಗಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದು ಕಾಲೇಜಿಗೆ ಮತ್ತು ತಾಲೂಕಿಗೆ ಕೀರ್ತಿತಂದ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲ ಈರಪ್ಪನಾಯಕ ಹಾಗೂ ಕಾಲೇಜಿನ ಸಿಬ್ಬಂದಿ ವಿಜೇತ ವಿದ್ಯಾರ್ಥಿಗಳಿಗೂ ಹಾಗೂ ಉತ್ತಮ ತರಬೇತಿ ನೀಡಿದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಸೌಭಾಗ್ಯ ರವರನ್ನು ಅಭಿನಂದಿಸಿದ್ದಾರೆ.
– ಶ್ರೀನಿವಾಸ್ ಕೊರಟಗೆರೆ.
