ಮೈಸೂರು ದಸರಾ ಮಹೋತ್ಸವ ಕಾರ್ಯಕ್ರಮಕ್ಕೆ ಹಾಸನ ಜಿಲ್ಲೆಯ ಎಲ್ಲಾ ಮಠಗಳ ಪರಮಪೂಜ್ಯ ಸ್ವಾಮೀಜಿಯವರನ್ನು ಕರ್ನಾಟಕ ಸರ್ಕಾರದ ವತಿಯಿಂದ ಆಹ್ವಾನಿಸಲಾಗುತ್ತಿದೆ.
ಜಿಲ್ಲಾಡಳಿತದ ನಿರ್ದೇಶನದಂತೆ 2026ರ ಅಕ್ಟೋಬರ್ 7ರಂದು ಹಾಸನ ಜಿಲ್ಲೆಯ ಹಲವು ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಯವರಿಗೆ ಗೌರವಪೂರ್ವಕವಾಗಿ ಆಹ್ವಾನ ಪತ್ರಿಕೆ ನೀಡಲಾಯಿತು.
ಈ ಸಂದರ್ಭದಲ್ಲಿ ಹಾಸನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಡಾ. ತಾರಾನಾಥ್, ಹಾಸನ ಜಿಲ್ಲಾ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಪ್ರಭಾರಿ ಅಧ್ಯಕ್ಷರಾದ ಪುನೀತ್ ಪಟೇಲ್ ಹಾಗೂ ಹಾಸನ ತಾಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾದ ಕಟ್ಟಾಯ ಶಿವಕುಮಾರ್ ಅವರು ಜಿಲ್ಲಾ ಆಡಳಿತದ ಪರವಾಗಿ ಸ್ವಾಮೀಜಿಯವರನ್ನು ಆಹ್ವಾನಿಸಿದರು.
ಹಾಸನ ಜಿಲ್ಲೆಯಲ್ಲಿ ಇರುವ ಒಟ್ಟು 22 ಮಠಗಳಿಗೂ ಆಹ್ವಾನ ಪತ್ರಿಕೆ ನೀಡಿ, ಪರಮಪೂಜ್ಯ ಸ್ವಾಮೀಜಿಯವರನ್ನು ಮೈಸೂರು ದಸರಾ ಮಹೋತ್ಸವಕ್ಕೆ ಗೌರವಪೂರ್ವಕವಾಗಿ ಆಹ್ವಾನಿಸಲಾಗುವುದು.
ಮೈಸೂರು ದಸರಾ ಮಹೋತ್ಸವದಲ್ಲಿ ಹಾಸನ ಜಿಲ್ಲೆಯ ಮಠಾಧೀಶರ ಭಾಗವಹಿಸುವಿಕೆ ಧಾರ್ಮಿಕ ಹಾಗೂ ಸಾಂಸ್ಕೃತಿಕವಾಗಿ ವಿಶೇಷ ಮಹತ್ವ ಹೊಂದಿದೆ.
– ಕುಮಾರಸ್ವಾಮಿ ಎಂ.ಎನ್.

