
ಮಂಗಳೂರು: ಸಿಐಎಸ್ಎಫ್ ಮಹಿಳಾ ಅಧಿಕಾರಿಯೊಬ್ಬರು ತನ್ನನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ರಾವ್ ಮತ್ತು ರಾವ್ ಸರ್ಕಲ್ ಬಳಿಯ ಲಾಡ್ಜ್ನಲ್ಲಿ ನೇಣಿಗೆ ಶರಣಾಗಿದ್ದು, ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶದ ಗಾಜಿಪುರದ ಅಭಿಷೇಕ್ ಸಿಂಗ್(40) ಎಂದು ಗುರುತಿಸಲಾಗಿದೆ. ಅಭಿಷೇಕ್ ಸಿಂಗ್ ಆತ್ಮಹತ್ಯೆಗೂ ಮುನ್ನ ವಿಡಿಯೋ ರೆಕಾರ್ಡ್ ಮಾಡಿ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದು, ಸಿಐಎಸ್ಎಫ್ ಸಹಾಯಕ ಕಮಾಂಡೆಂಟ್ ಮೋನಿಕಾ ಸಿಹಾಗ್ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್, ಕೆಲವು ದಿನಗಳ ಹಿಂದೆ ಸಹೋದ್ಯೋಗಿಗಳೊಂದಿಗೆ ವಸ್ತುಪ್ರದರ್ಶನವೊಂದರಲ್ಲಿ ಭಾಗವಹಿಸಲು ಮಂಗಳೂರಿಗೆ ಬಂದಿದ್ದರು. ಅವರು ನಗರದ ರಾವ್ ಮತ್ತು ರಾವ್ ವೃತ್ತದ ಬಳಿ ಇರುವ ಲಾಡ್ಜ್ವೊಂದರಲ್ಲಿ ತಂಗಿದ್ದರು. ಈಗ ಅದೇ ಲಾಡ್ಜ್ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಸಾವಿಗೂ ಮುನ್ನ ವಿಡಿಯೋ ಪೋಸ್ಟ್ ಮಾಡಿರುವ ಅಭಿಷೇಕ್, ಮೋನಿಕಾ ಸಿಹಾಗ್ ಈಗಾಗಲೇ ವಿವಾಹಿತೆಯಾಗಿದ್ದು, ಆ ವಿಷಯವನ್ನು ಮುಚ್ಚಿಟ್ಟು ತನ್ನೊಂದಿಗೆ ಸಂಬಂಧ ಬೆಳೆಸಿದ್ದರು ಎಂದು ಅಭಿಷೇಕ್ ಸಿಂಗ್ ವಿಡಿಯೋದಲ್ಲಿ ಆರೋಪಿಸಿದ್ದು, ಈ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಗೆ ಮುನ್ನ ಅಭಿಷೇಕ್ ಸಿಂಗ್ ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿದ್ದು, ಅದರಲ್ಲಿ ಮೋನಿಕಾ ಸಿಹಾಗ್ ಅವರು ತಮ್ಮನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮೋನಿಕಾ ಸಿಹಾಗ್ ಈಗಾಗಲೇ ವಿವಾಹಿತೆಯಾಗಿದ್ದು, ಆ ವಿಷಯವನ್ನು ಮುಚ್ಚಿಟ್ಟಿದ್ದಾಳೆ. ಪ್ರೀತಿಯ ನೆಪದಲ್ಲಿ ತನ್ನಿಂದ ದೈಹಿಕ ಸುಖ, ಆರ್ಥಿಕ ಲಾಭ ಪಡೆದು ಮೋಸ ಮಾಡಿದ್ದಾಳೆ. ಹಾಗೆ ಹಲವರ ಜೊತೆಗೆ ಇದೇ ರೀತಿಯ ಸಂಬಂಧ ಇಟ್ಟುಕೊಂಡಿರುವುದು ತಿಳಿದುಬಂದಿದೆ. ಮೋನಿಕಾಗೆ ಎಂಟು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ತೆಗೆದುಕೊಟ್ಟಿದ್ದೇನೆ. ಮೋನಿಕಾ ಸಿಂಗ್, ಗುಜರಾತಿನ ಅಹ್ಮದಾಬಾದ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಳೆ ಎಂದು ಅಭಿಷೇಕ್ ವಿಡಿಯೋನಲ್ಲಿ ಹೇಳಿಕೊಂಡಿದ್ದಾನೆ.
ಇನ್ನು ಈ ಪ್ರಕರಣದ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಪ್ರತಿಕ್ರಿಯಿಸಿದ್ದು, ಮೃತ ಅಭಿಷೇಕ್ ಸಹೋದರ ಇಂದು ಮೋನಿಕಾ ವಿರುದ್ಧ ದೂರು ನೀಡಿದ್ದಾರೆ. 15 ಲಕ್ಷ ಹಣ, ಚಿನ್ನ ವಂಚನೆ ಆರೋಪ ಕೂಡ ಇದೆ. ಹಾಗೇ ಲೈಂಗಿಕ ಕಿರುಕುಳ ಕೊಟ್ಟಿರುವ ಬಗ್ಗೆ ದೂರು ದಾಖಲಾಗಿದ್ದು, ಸಿಐಎಸ್ಎಫ್ ಮೋನಿಕಾ ಸಿಹಾಗ್ ಗೆ ನೋಟೀಸ್ ನೀಡಲಾಗಿದೆ ಎಂದು ಮಾಹಿತಿ ನೀಡಿದರು.