ಶ್ರವಣಬೆಳಗೊಳ: ಮಂಗಳೂರು–ಶ್ರವಣಬೆಳಗೊಳ–ಬೆಂಗಳೂರು ಮಾರ್ಗವಾಗಿ ಸಂಚರಿಸಲಿರುವ ನೂತನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಶುಕ್ರವಾರ ಶ್ರವಣಬೆಳಗೊಳ ರೈಲು ನಿಲ್ದಾಣಕ್ಕೆ ಆಗಮಿಸಿತು.
ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಮಂಗಳೂರಿನಿಂದ ನೂತನ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿ ಶ್ರವಣಬೆಳಗೊಳಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿ ಶ್ರೀಕ್ಷೇತ್ರ ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಶಾಸಕ ಸಿ.ಎನ್. ಬಾಲಕೃಷ್ಣ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
