ಹಾಸನ: ನಗರದ ತಣ್ಣೀರುಹಳ್ಳ ಮಠಕ್ಕೆ ಸಿದ್ದಗಂಗಾ ಮಠದ ಕಿರಿಯ ಶ್ರೀಗಳು ಆಗಮಿಸಿದ ಸಂದರ್ಭದಲ್ಲಿ ಭಕ್ತರು ಹಾಗೂ ಗಣ್ಯರು ಭಕ್ತಿಭಾವದಿಂದ ಸ್ವಾಗತಿಸಿದರು. ಶ್ರೀಗಳ ಆಶೀರ್ವಾದ ಪಡೆಯಲು ಅನೇಕ ಭಕ್ತರು ಹರಿದುಬಂದರು.


ಈ ಸಂದರ್ಭದಲ್ಲಿ ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಎನ್. ಕುಮಾರಸ್ವಾಮಿ, ಸಾಹಿತಿ ಮಂಜುನಾಥ್, ಪುರೋಹಿತ ಕೊಡ್ಲಿಪೇಟೆ ಸೋಮಶೇಖರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಮಠದ ವತಿಯಿಂದ ಪೂಜೆ ಹಾಗೂ ಆಶೀರ್ವಾದ ಕಾರ್ಯಕ್ರಮ ನಡೆಯಿತು.
ಶ್ರೀಗಳ ಭೇಟಿ ಮಠದ ಭಕ್ತರಲ್ಲಿ ಆಧ್ಯಾತ್ಮಿಕ ಉತ್ಸಾಹವನ್ನು ಹೆಚ್ಚಿಸಿತು ಎಂದು ಅಭಿಪ್ರಾಯ ವ್ಯಕ್ತವಾಯಿತು.
ಫೋಟೋ ಶೀರ್ಷಿಕೆ: ಹಾಸನ ತಣ್ಣೀರುಹಳ್ಳ ಮಠಕ್ಕೆ ಸಿದ್ದಗಂಗಾ ಕಿರಿಯ ಶ್ರೀಗಳು ಆಗಮಿಸಿದ ಸಂದರ್ಭದಲ್ಲಿ ಗಣ್ಯರು ಉಪಸ್ಥಿತರಿರುವುದು.
ವರದಿ: ಕುಮಾರಸ್ವಾಮಿ
