ಬೆಂಗಳೂರು, ನ.29: ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಸಿಎಂ ನಿವಾಸ ಕಾವೇರಿಯಲ್ಲಿ ಜಂಟಿ ಬ್ರೇಕ್ಫಾಸ್ಟ್ ಮೀಟಿಂಗ್ ನಡೆಸಿದ್ದು, ಬಳಿಕ ಜಂಟಿ ಸುದ್ದಿಗೋಷ್ಠಿ ಮೂಲಕ ಪಕ್ಷದೊಳಗಿನ ಗೊಂದಲಗಳಿಗೆ ತೆರೆ ಎಳೆದು “ಒಗ್ಗಟ್ಟಾಗಿದೆ” ಎಂಬ ಸಂದೇಶ ನೀಡಿದ್ದಾರೆ.
ಸುದ್ದಿಗೋಷ್ಠಿಯ ಮುಖ್ಯಾಂಶಗಳು :
🔹 ಸಿಎಂ ಸಿದ್ದರಾಮಯ್ಯ ಹೇಳಿದ್ದು–
“ನಾನು, ಡಿ.ಕೆ.ಶಿವಕುಮಾರ್ ಹಾಗೂ ಪೊನ್ನಣ್ಣ—ನಾವು ಮೂವರು ಬ್ರೇಕ್ಫಾಸ್ಟ್ನಲ್ಲಿ ಭಾಗಿಯಾಗಿದ್ದೇವೆ. ಅಲ್ಲಿ ಯಾವುದೇ ರಾಜಕೀಯ ಮಾತುಕತೆ ನಡೆದಿಲ್ಲ, ಉಪಾಹಾರ ಚೆನ್ನಾಗಿತ್ತು. ಹೈಕಮಾಂಡ್ ಸೂಚನೆ ಮೇರೆಗೆ ಈ ಭೇಟಿಯಾಗಿದೆ.”
🔹 “ನಮ್ಮ ನಡುವೆ ಭಿನ್ನಾಭಿಪ್ರಾಯವೇ ಇಲ್ಲ. ಒಂದು ತಿಂಗಳಿನಿಂದ ಕೆಲವು ಗೊಂದಲಗಳು ಉಂಟಾಗಿದ್ದವು; ಇಂದು ಅದನ್ನು ನಿವಾರಿಸಿಕೊಂಡಿದ್ದೇವೆ.”
🔹 “2028 ರ ವಿಧಾನಸಭೆ ಚುನಾವಣೆ ಸೇರಿದಂತೆ ಸ್ಥಳೀಯ ಸಂಸ್ಥೆ, ತಾಲೂಕು, ಜಿಲ್ಲಾ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಯ ವಿಚಾರದಲ್ಲೂ ನಾವು ಒಟ್ಟಿಗೆ ಕೆಲಸ ಮಾಡುತ್ತೇವೆ.”
🔹 “ಡಿಸೆಂಬರ್ 8ರಿಂದ ಆರಂಭಗೊಳ್ಳುವ ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿಯ ಸುಳ್ಳು ಪ್ರಚಾರವನ್ನು ನಾವು ಒಟ್ಟಾಗಿ ಎದುರಿಸುತ್ತೇವೆ.”
🔹 “ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಅದನ್ನು ನಾವಿಬ್ಬರೂ ಪಾಲಿಸುತ್ತೇವೆ. ಈಗಿನಿಂದ ಯಾವುದೇ ಗೊಂದಲ ಇರುವುದಿಲ್ಲ.”
🔹 “ಕೆಲವು ಶಾಸಕರು ಸಚಿವ ಸ್ಥಾನಕ್ಕಾಗಿ ದೆಹಲಿಗೆ ಹೋಗಿರಬಹುದು. ಕೆಲವರು ಬಂದು ನನಗೆ ತಿಳಿಸಿದ್ದಾರೆ.”
ಇದನ್ನು ಓದಿ: ಪೋರ್ಚುಗಲ್ಗೆ ಫಿಫಾ ಅಂಡರ್–17 ವಿಶ್ವಕಪ್ ಮೊದಲ ಕಿರೀಟ — ಕ್ಯಾಬ್ರಾಲ್ 7 ಗೋಲ್ಗಳ ಹ್ಯಾಟ್ರಿಕ್ ಗ್ಲೋರಿ
ಡಿಕೆ ಶಿವಕುಮಾರ್ ಹೇಳಿದ್ದು–
“ಜನರಿಗೆ ಕೊಟ್ಟ ಮಾತಿನಂತೆ ನಡೆಯುತ್ತೇವೆ. ಸರ್ಕಾರ ಸಿದ್ದರಾಮಯ್ಯ ನೇತೃತ್ವದಲ್ಲಿ ರಚಿತವಾಗಿದೆ. ನಮ್ಮಿಬ್ಬರ ನಡುವೆ ಯಾವುದೇ ಗುಂಪುಗಾರಿಕೆ ಇಲ್ಲ. ಹೈಕಮಾಂಡ್ ಹೇಳಿದಂತೆ ನಾವು ನಡೆದುಕೊಳ್ಳುತ್ತೇವೆ.”
ಭೇಟಿಯ ಹಿನ್ನೆಲೆ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಭೇಟಿ ನೀಡಿ ಉಪಾಹಾರದಲ್ಲಿ ಪಾಲ್ಗೊಂಡರು. ಈ ವೇಳೆ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಸಹ ಹಾಜರಿದ್ದರು. ಇತ್ತೀಚಿನ CM–DCM ಗೊಂದಲದ ನಡುವೆ ನಡೆದ ಈ ಜಂಟಿ ಸಭೆ ಪಕ್ಷದ ಒಳಘರ್ಷಣೆಗೆ ವಿರಾಮ ಘೋಷಿಸಿದೆ ಎಂಬ ರಾಜಕೀಯ ವಲಯದಲ್ಲಿ ಚರ್ಚೆ.
