Oplus_16908288
ಬೆಂಗಳೂರು : ಕರ್ನಾಟಕ ವಿಧಾನಸಭೆಗೆ ಪ್ರಸ್ತುತ ಚುನಾವಣೆ ನಡೆದರೆ ಆಡಳಿತಾರೂಢ ಕಾಂಗ್ರೆಸ್ ಅನ್ನು ಬಿಜೆಪಿ ಪರಾಭವಗೊಳಿಸಿ ಸ್ಪಷ್ಟ ಬಹುಮತಗಳೊಂದಿಗೆ ಅಧಿಕಾರಕ್ಕೇರಲಿದೆ. ಜೆಡಿಎಸ್ ಮೂರನೇ ಸ್ಥಾನದಲ್ಲಿರಲಿದೆ ಎಂದು ಹೈದರಾಬಾದ್ ಮೂಲದ ಪೀಪಲ್ಸ್ ಪಲ್ಸ್ ಮತ್ತು ಕೊಡೆಮೊ ಟೆಕ್ನಾಲಜೀಸ್ ನಡೆಸಿದ ಸಮೀಕ್ಷಾ ವರದಿ ಹೇಳಿದೆ.
ಆದರೆ, ಕರ್ನಾಟಕದಲ್ಲಿ ಈಗಲೂ ಸಿದ್ದರಾಮಯ್ಯ ಜನಪ್ರಿಯ ಮುಖ್ಯಮಂತ್ರಿ ಎಂದೂ ಸರ್ವೇ ಉಲ್ಲೇಖಿಸಿದೆ.
ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಈಗಲೂ ಅತ್ಯಂತ ಜನಪ್ರಿಯ ಮುಖ್ಯಮಂತ್ರಿಯಾಗಿದ್ದಾರೆ. ಶೇ.29.2ರಷ್ಟು ಮತದಾರರು ಸಿದ್ದರಾಮಯ್ಯಗಾಗಿ ಮತ ಹಾಕಲಿದ್ದಾರೆ.
ಮತ್ತೊಂದೆಡೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪರವಾಗಿ ಮತ ಹಾಕುವವರ ಸಂಖ್ಯೆ ಶೇ.10.7ರಷ್ಟು. ಅತ್ತ ಬಿ.ಎಸ್ ಯಡಿಯೂರಪ್ಪ ಪರ ಮತಹಾಕುವವರ ಸಂಖ್ಯೆ ಶೇ 5.5, ಬಸವರಾಜ ಬೊಮ್ಮಾಯಿಗೆ ಶೇ 3.6, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪರವಾಗಿ ಶೇ 5.2ರಷ್ಟು ಮತಗಳು ಸಿಗುವ ಸಾಧ್ಯತೆಗಳಿವೆ.
