ರಾಜಧಾನಿ ಬೆಂಗಳೂರುನಲ್ಲಿ ದಾರುಣ ಘಟನೆ ಸಂಭವಿಸಿದ್ದು, ಬಸವರಾಜ್ ಬೊಮ್ಮಾಯಿ ಅವರ ಪಿಎ ಚಂದ್ರು ಅವರ ಪುತ್ರ ಹೇಮಂತ್ (20) ಆತ್ಮಹತ್ಯೆಗೆ ಶರಣಾಗಿದ್ದಾನೆ.
ನಗರದ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಲೊಟ್ಟೆ ಗೊಲ್ಲಹಳ್ಳಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಹೇಮಂತ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮಾಹಿತಿ ತಿಳಿದ ತಕ್ಷಣ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
