ತುಮಕೂರು:ಆಗ್ನೇಯ ಪದವಿಧರ ವಿಧಾನಪರಿಷತ್ ಚುನಾವಣೆಯ ಮತದಾರರ ಪಟ್ಟಿಯಲ್ಲಿ ಅರ್ಹ ಪದವಿಧರರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿ 2026ರಲ್ಲಿ ನಡೆಯುವ ಚುನಾವಣೆಯಲ್ಲಿ ತಮ್ಮ ಸಾಂವಿಧಾನಿಕ ಹಕ್ಕು ಚಲಾಯಿಸುವಂತೆ ಬಿಜೆಪಿ ಕಾನೂನು ಪ್ರಕೋಷ್ಠ ರಾಜ್ಯ ಸಂಚಾಲಕ ವಸಂತಕುಮಾರ್ ಮನವಿ ಮಾಡಿದ್ದಾರೆ.
ಆಗ್ನೇಯ ಪದವಿಧರ ಕ್ಷೇತ್ರದ ಆಕಾಂಕ್ಷಿಯೂ ಆಗಿರುವ ಇವರು ಈ ಸಂಬಂಧ ಹೇಳಿಕೆ ನೀಡಿ, ಹೆಚ್ಚು ಪದವಿಧರರು ಮತದಾರರ ಪಟ್ಟಿ ಸೇರಲು ನೋಂದಣಿಯ ಕಡೆಯ ದಿನಾಂಕವನ್ನು ವಿಸ್ತರಿಸಬೇಕು ಎಂದು ತಾವು ಚುನಾವಣಾಧಿಕಾರಿಗಳಿಗೆ ಮನವಿ ಮಾಡಿದ್ದು, ನಮ್ಮ ಮನವಿಗೆ ಸ್ಪಂದಿಸಿ ನವೆಂಬರ್ 25ರಿಂದ ಡಿಸೆಂಬರ್ 10ರವರೆಗೆ ಮತದಾರರ ನೋಂದಣಿಗೆ ಅವಕಾಶ ನೀಡಿದ್ದಾರೆ.ಅರ್ಹ ಪದವಿಧರರು ಈ ಅವಕಾಶ ಬಳಸಿಕೊಳ್ಳಬೇಕು ಎಂದುಕೋರಿದ್ದಾರೆ.
ಕಳೆದ ಚುನಾವಣೆಗೆ ಹೋಲಿಸಿದರೆ ಈ ಬಾರಿ ಆಗ್ನೆಯ ಪದವಿಧರ ಕ್ಷೇತ್ರದ ಮತದಾರರ ಸಂಖ್ಯೆ ಈಗಾಗಲೇ ಹೆಚ್ಚು ನೋಂದಣಿಯಾಗಿದೆ.ಅದರಲ್ಲೂ ತುಮಕೂರು ಜಿಲ್ಲೆಯಲ್ಲಿ ನೋಂದಣಿಯಾಗಿರುವ ಮತದಾರರ ಸಂಖ್ಯೆ ಉಳಿದ ಜಿಲ್ಲೆಗಳಿಗಿಂತ ಅಧಿಕವಾಗಿದೆ.ಇದೂವರೆಗೆ ತುಮಕೂರು ಜಿಲ್ಲೆಯಲ್ಲಿ 41 ಸಾವಿರ, ಚಿತ್ರದುರ್ಗ ಜಿಲ್ಲೆಯಲ್ಲಿ 37 ಸಾವಿರ, ಚಿಕ್ಕಬಳ್ಳಾಪುರ ಜಿಲ್ಲೆ 23,500, ದಾವಣಗೆರೆಜಿಲ್ಲೆ 24,500, ಕೋಲಾರಜಿಲ್ಲೆಯಲ್ಲಿ 27,500 ಸೇರಿದಂತೆ ಒಟ್ಟು 1,53,500 ಮತದಾರರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿದ್ದಾರೆ ಎಂದು ವಸಂತಕುಮಾರ್ ತಿಳಿಸಿದ್ದಾರೆ.
– ಕೆ.ಬಿ.ಚಂದ್ರಚೂಡ
