ಹಾಸನ, ಮಾ.20: ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ರವಿ ನಾಕಲಗೂಡುರವರು, ಇಂದು ಹಾಸನದ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠಕ್ಕೆ ಭೇಟಿ ನೀಡಿ, ಪರಮಪೂಜ್ಯ ಶ್ರೀ ಶ್ರೀ ಶಂಭುನಾಥ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ರವಿ ನಾಕಲಗೂಡುರವರು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಆಕಾಂಕ್ಷೆಯನ್ನು ವ್ಯಕ್ತಪಡಿಸಿ, ಸಾಹಿತ್ಯ, ಸಂಸ್ಕೃತಿ ಮತ್ತು ಕನ್ನಡಾಭಿವೃದ್ಧಿಗೆ ತಮ್ಮ ಬದ್ಧತೆಯನ್ನು ಮಹಾಸ್ವಾಮೀಜಿಗಳ ಸನ್ನಿಧಿಯಲ್ಲಿ ಹಂಚಿಕೊಂಡರು ಎಂದು ತಿಳಿದುಬಂದಿದೆ.
ಶ್ರೀ ಶಂಭುನಾಥ ಮಹಾಸ್ವಾಮೀಜಿಗಳು ರವಿ ನಾಕಲಗೂಡುರವರಿಗೆ ಶುಭ ಹಾರೈಸಿ, ಸಾರ್ವಜನಿಕ ಜೀವನದಲ್ಲಿ ಉತ್ತಮ ಸೇವೆ ಸಲ್ಲಿಸುವಂತೆ ಆಶೀರ್ವದಿಸಿದರು.
ಸಾಹಿತ್ಯ, ಸಾಮಾಜಿಕ ಹಾಗೂ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ರವಿ ನಾಕಲಗೂಡುರವರ ಈ ಭೇಟಿ, ಜಿಲ್ಲಾ ಸಾಹಿತ್ಯ ವಲಯದಲ್ಲಿ ಗಮನ ಸೆಳೆದಿದೆ.
– ಮಂಜುನಾಥ್ ಐ.ಕೆ
