ಶೃಂಗೇರಿ : ಆರೋಗ್ಯ ಸೇವೆಯನ್ನು ಜನಸಾಮಾನ್ಯರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಶ್ರೀ ಅಭಿನವ ವಿದ್ಯಾತೀರ್ಥ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ (SAVMH) ವತಿಯಿಂದ ಆಯೋಜಿಸಲಾದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯಿತು.
ಶ್ರೀ ಜೆಸಿಬಿಎಂ ಕಾಲೇಜು ಆವರಣದಲ್ಲಿ ನಡೆದ ಶಿಬಿರದಲ್ಲಿ ಸುಮಾರು 300ಕ್ಕೂ ಹೆಚ್ಚು ಮಂದಿ ಭಾಗವಹಿಸಿ ವಿವಿಧ ಆರೋಗ್ಯ ತಪಾಸಣೆ ಹಾಗೂ ತಜ್ಞ ವೈದ್ಯರ ಸಲಹೆಯ ಪ್ರಯೋಜನ ಪಡೆದರು. ಶ್ರೀ ಅಭಿನವ ವಿದ್ಯಾತೀರ್ಥ ಮೊಬೈಲ್ ಆಸ್ಪತ್ರೆಯ ಮೂಲಕ ಆರೋಗ್ಯ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲಾಯಿತು.
ಶಿಬಿರದಲ್ಲಿ ಡಾ. ಸುಷ್ಮಾ ಪಾಟೀಲ್ ಅವರು ಕಿವಿ, ಮೂಗು, ಗಂಟಲು ಹಾಗೂ ಸಾಮಾನ್ಯ ಆರೋಗ್ಯ ಸಮಸ್ಯೆಗಳ ಕುರಿತು ತಪಾಸಣೆ ನಡೆಸಿ ಅಗತ್ಯ ಸಲಹೆ ನೀಡಿದರು. ಡಾ. ಪ್ರಶಾಂತ್ ಹಾಗೂ ಡಾ. ಅನುಪಮಾ ಅವರು ಸಾಮಾನ್ಯ ಆರೋಗ್ಯ ತಪಾಸಣೆ ನಡೆಸಿ ರೋಗಿಗಳಿಗೆ ಸೂಕ್ತ ವೈದ್ಯಕೀಯ ಮಾರ್ಗದರ್ಶನ ನೀಡಿದರು. ಡಾ. ಉಷಾ ನಾಯಕ್ ಅವರು ದಂತ ಆರೋಗ್ಯ ತಪಾಸಣೆ ನಡೆಸಿದರೆ, ರೆಣುಕಾರಾಧ್ಯ ಅವರು ಕಣ್ಣಿನ ತಪಾಸಣೆ ಮಾಡಿ ಸಾರ್ವಜನಿಕರಿಗೆ ಸಲಹೆ ನೀಡಿದರು.
ಶಿಬಿರದಲ್ಲಿ ರಕ್ತದೊತ್ತಡ, ಮಧುಮೇಹ, ಉಸಿರಾಟದ ಸಮಸ್ಯೆಗಳು, ಕಿವಿ-ಮೂಗು-ಗಂಟಲು ತೊಂದರೆಗಳು, ದಂತ ಸಮಸ್ಯೆಗಳು ಹಾಗೂ ಕಣ್ಣಿನ ಆರೋಗ್ಯ ಸಂಬಂಧಿತ ತಪಾಸಣೆಗಳನ್ನು ನಡೆಸಲಾಯಿತು. ಅಗತ್ಯವಿರುವ ರೋಗಿಗಳಿಗೆ ಮುಂದಿನ ಚಿಕಿತ್ಸೆಗೆ ಸಂಬಂಧಿಸಿದ ಸಲಹೆ ಹಾಗೂ ಮಾರ್ಗದರ್ಶನವನ್ನು ನೀಡಲಾಯಿತು.
ಶಿಬಿರದ ಅಂಗವಾಗಿ ಪ್ರಯೋಗಾಲಯ ಪರೀಕ್ಷೆಗಳು ಹಾಗೂ ಎಕ್ಸ್-ರೇ ಸೇವೆಗಳನ್ನು ರಿಯಾಯಿತಿ ದರದಲ್ಲಿ ಒದಗಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡರು.
ಆರೋಗ್ಯ ಸೇವೆಗಳು ಎಲ್ಲರಿಗೂ ಸುಲಭವಾಗಿ ಲಭ್ಯವಾಗಬೇಕೆಂಬ ಉದ್ದೇಶದಿಂದ ಶ್ರೀ ಅಭಿನವ ವಿದ್ಯಾತೀರ್ಥ ಮೊಬೈಲ್ ಆಸ್ಪತ್ರೆಯ ಮೂಲಕ ಇಂತಹ ಆರೋಗ್ಯ ಶಿಬಿರಗಳನ್ನು ಮುಂದಿನ ದಿನಗಳಲ್ಲಿಯೂ ವಿವಿಧ ಪ್ರದೇಶಗಳಲ್ಲಿ ಆಯೋಜಿಸಲಾಗುವುದು ಎಂದು ಆಸ್ಪತ್ರೆ ಆಡಳಿತ ತಿಳಿಸಿತು. ದಿನಾಂಕ 12 ಜೂನ್ 2026 ರಂದು . ಶ್ರೀ ದುರ್ಗಾ ಸಮೇತ ಮಧುತ್ತಮೇಶ್ವರ ಸ್ವಾಮಿ ಸನ್ನಿಧಾನದಲ್ಲಿ ಸಾರ್ವಜನಿಕರಿಗೆ ಉಚಿತ ತಪಾಸಣಾ ಶಿಬಿರವು 10.30 ರಿಂದ 4 ಗಂಟೆಯವರೆಗೆ ನಡೆಯಲಿದೆ ಎಂದು ಜನಸಾಮಾನ್ಯರಿಗೆ ತಿಳಿಸಲಾಯಿತು..
