ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟ 11 ಮಂದಿಯ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 10 ಲಕ್ಷ ಪರಿಹಾರ ಘೋಷಿಸಿತ್ತು. ಇದೀಗ ಆರ್ಸಿಬಿ ಪ್ರಾಂಚೈಸಿ ಹಾಗೂ ಕೆಎಸ್ಸಿಎ ವತಿಯಂದ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಲಾಗಿದೆ.
ಕಾಲ್ತುಳಿತ ದುರಂತದಲ್ಲಿ ಭೂಮಿಕ್ (21), ಸಹನಾ, ಪೂರ್ಣಚಂದ್ರ, ದಿವ್ಯಾಂಶಿ(13) , ದಿವ್ಯಾ(26), ದೇವಿ, ಶಿವು(17), ಶರವಣ(21), ಮನೋಜ್ ಸೇರಿ 11 ಆರ್ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಇವರ ಕುಟುಂಬಗಳಿಗೆ ಪರಿಹಾರ ಘೋಷಣೆಯಾಗಿದೆ.
ಈ ಬಗ್ಗೆ ಆರ್ಸಿಬಿ-ಕೆಎಸ್ಸಿಎ ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಆರ್ಸಿಬಿ ವಿಜಯೋತ್ಸವ ವೇಳೆ ನಡೆದ ದುರ್ಘಟನೆಗೆ ತೀವ್ರ ಸಂತಾಪ ಸೂಚಿಸುತ್ತೇವೆ. ಈ ದುಃಖದ ಸಂದರ್ಭದಲ್ಲಿ ನಾವು ಮೃತರ ಕುಟುಂಬಗಳೊಂದಿಗೆ ಇರುತ್ತೇವೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿವೆ.
