ಆರ್‌ಸಿಬಿ ವಿಜಯೋತ್ಸವ ದುರಂತ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ವಿರುದ್ಧ ಸ್ನೇಹಮಯಿ ಕೃಷ್ಣರಿಂದ ಪೊಲೀಸ್ ದೂರು

ಆರ್‌.ಸಿ.ಬಿ. ವಿಜಯೋತ್ಸವದ ವೇಳೆ ಸಂಭವಿಸಿದ ನೂಕುನುಗ್ಗಲು ದುರಂತಕ್ಕೆ ಸಂಬಂಧಿಸಿದಂತೆ, ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿ ರಾಜಕೀಯ ಲಾಭದ ಆಸೆಗೆ ಇಂತಹ ಕಾರ್ಯಕ್ರಮ ಆಯೋಜನೆ ಮಾಡಿ ಜನರ ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಸ್ನೇಹಮಯಿ ಕೃಷ್ಣ ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ರಾಜ್ಯ ಕ್ರಿಕೆಟ್ ಮಂಡಳಿ ವಿರುದ್ಧ ದೂರು ನೀಡಿದ್ದಾರೆ.