ಬೆಂಗಳೂರು, ಜೂ. 9: ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ (ರಿ), ಸಿದ್ಧನಹಳ್ಳಿ ವತಿಯಿಂದ ಜೂನ್ 28ರಂದು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಜಾನಪದ ಸಾಹಿತ್ಯ ಸಂಸ್ಕೃತಿ ಸಮಾವೇಶವನ್ನು ಆಯೋಜಿಸಲಾಗಿದೆ.
ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಸಭಾಂಗಣದಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಡೆಯಲಿರುವ ಸಮಾವೇಶದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯರಾದ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಸಾ.ಮ. ಶಿವಮಲ್ಲಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.
ಸಮಾವೇಶದಲ್ಲಿ ಜಾನಪದ ಗೀತೆಗಳ ಗಾಯನ, ಜಾನಪದ ನೃತ್ಯ ಪ್ರದರ್ಶನ ಹಾಗೂ ಕವಿಗೋಷ್ಠಿ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕವಿಗೋಷ್ಠಿಯಲ್ಲಿ ಭಾಗವಹಿಸುವ ಕವಿಗಳು ಕನಿಷ್ಠ ಒಂದು ಕವನ ಸಂಕಲನ ಪ್ರಕಟಿಸಿರಬೇಕು ಎಂದು ಸಂಘಟಕರು ತಿಳಿಸಿದ್ದಾರೆ.
ಸಾಹಿತ್ಯ, ಸಂಸ್ಕೃತಿ, ಸಂಘಟನೆ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ಮತ್ತು ಇದುವರೆಗೆ ಯಾವುದೇ ಪ್ರಶಸ್ತಿ ಅಥವಾ ಸನ್ಮಾನ ಪಡೆಯದ ಸಾಧಕರನ್ನು ಗೌರವಿಸಲು ಉದ್ದೇಶಿಸಲಾಗಿದ್ದು, ಅಂತಹ ವ್ಯಕ್ತಿಗಳ ಹೆಸರನ್ನು ಶಿಫಾರಸು ಮಾಡುವಂತೆ ಟ್ರಸ್ಟ್ ಮನವಿ ಮಾಡಿದೆ.
ಹೆಸರು ನೋಂದಣಿಗೆ ಜೂನ್ 15 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9448880985 ಅನ್ನು ಸಂಪರ್ಕಿಸಬಹುದು ಎಂದು ಬಿಬಿಜಿಎಸ್ ಟ್ರಸ್ಟ್ ಅಧ್ಯಕ್ಷ ಡಾ. ಸಿಸಿರಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
