ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಕಟ್ಟುನಿಟ್ಟಿನ ಶಿಸ್ತು: ನಿಯಮ ಉಲ್ಲಂಘಿಸಿದರೆ ಕ್ರಮ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಗಳಲ್ಲಿ ಕಟ್ಟುನಿಟ್ಟಿನ ಶಿಸ್ತು ಪಾಲಿಸಲು ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಸಮಯ ಪಾಲನೆ, ಗುರುತಿನ ಚೀಟಿ ಧರಿಸುವುದು, ಮೂವ್ಮೆಂಟ್ ರಿಜಿಸ್ಟರ್‌ನಲ್ಲಿ ದಾಖಲೆ ಮಾಡುವುದು ಸೇರಿದಂತೆ ಹಲವು ನಿಯಮಗಳನ್ನು ಕಡ್ಡಾಯಗೊಳಿಸಲಾಗಿದ್ದು, ಉಲ್ಲಂಘಿಸಿದರೆ CCA ನಿಯಮಗಳಡಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.