ಹಾಸನ: ನಗರದ ಟೌನ್ ಪ್ರದೇಶದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿ ವಿದ್ಯಾರ್ಥಿಗಳಿಂದ ವಚನ ಗಾಯನ, ನೃತ್ಯ ಕಾರ್ಯಕ್ರಮಗಳು ಹಾಗೂ ಬಹುಮಾನ ವಿತರಣಾ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ (ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರು), ಪ್ರಧಾನ ಕಾರ್ಯದರ್ಶಿ , ಕದಳಿ ಮಹಿಳಾ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣೆ ಸೌಭಾಗ್ಯ, ತಾಲ್ಲೂಕು ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ಶರಣೆ ಗಿರಿಜಾ ನಿರ್ವಾಣಿ, ಉಪಾಧ್ಯಕ್ಷೆ ಶರಣೆ ಬಿ.ಎಸ್. ಸುನಂದ, ಸಕಲೇಶಪುರ ತಾಲ್ಲೂಕು ಅಧ್ಯಕ್ಷೆ ಶರಣೆ ಮೀನಾಕ್ಷಿಖಾದರ್ ಸೇರಿದಂತೆ ಶರಣೆ ಶಶಿರೇಖಾ, ಶಾರದ ಗುರುಮೂರ್ತಿ, ಜ್ಯೋತಿ ಮುಂತಾದವರು ಭಾಗವಹಿಸಿದ್ದರು.

ವಿದ್ಯಾರ್ಥಿಗಳ ಪ್ರತಿಭೆಯನ್ನು ಉತ್ತೇಜಿಸುವ ಉದ್ದೇಶದಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕರು, ಪೋಷಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ವರದಿ- ಕುಮಾರ ಸ್ವಾಮಿ
