ಟಿ.ನರಸೀಪುರ: ಪಾಕಿಸ್ತಾನವನ್ನು ವಿಶ್ವಸಂಸ್ಥೆ ಬಹಿಷ್ಕರಿಸಬೇಕು – ವರುಣ ವಿಧಾನ ಸಭಾ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ತೋಟದಪ್ಪ ಬಸವರಾಜು

ಟಿ.ನರಸೀಪುರದ ಮಾಜಿ ಬಿಜೆಪಿ ಅಭ್ಯರ್ಥಿ ತೋಟದಪ್ಪ ಬಸವರಾಜು, ಮುಂಬೈ ದಾಳಿಯ ಸಂಚುಕೋರ ತಹವೂರ್ ರಾಣೆಯ ಹೇಳಿಕೆಯ ಹಿನ್ನೆಲೆಯಲ್ಲಿ ಪಾಕಿಸ್ತಾನವನ್ನು ವಿಶ್ವಸಂಸ್ಥೆ ಬಹಿಷ್ಕರಿಸಬೇಕೆಂದು ಆಗ್ರಹಿಸಿದರು. ಪಾಕಿಸ್ತಾನಕ್ಕೆ ಸಹಾಯ ನೀಡುವ ಚೀನಾ ಮತ್ತು ಟರ್ಕಿಯ ಮೇಲೂ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು. ರಾಜ್ಯ ಸರ್ಕಾರದ ದುಶಾಸನವನ್ನು ತರಾಟೆಗೆ ತೆಗೆದುಕೊಂಡ ಅವರು, ಸಿದ್ದರಾಮಯ್ಯನವರ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದರು.