ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 34ಕ್ಕೆ ಏರಿಕೆಯಾಗಿದ್ದು, 30ಕ್ಕೂ ಹೆಚ್ಚು ಗಾಯಳುಗಳಿಗೆ ಚಿಕಿತ್ಸೆ ಮುಂದುವರಿದಿದೆ.
ಸೋಮವಾರ ಸಿಗಾಚಿ ರಾಸಾಯನಿಕ ಇಂಡಸ್ಟ್ರಿಯಲ್ಲಿ ರಿಯಾಕ್ಟರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿತ್ತು.
ಗಾಯಾಳುಗಳನ್ನು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆ ವೇಳೆ ಹಲವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಮೃತರ ಕುಟುಂಬಗಳಿಗೆ ಪಿಎಂಎನ್ಆರ್ಎಫ್ನಿಂದ ತಲಾ 2 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಗಾಯಾಳುಗಳಿಗೆ 50 ಸಾವಿರ ರೂ ನೀಡಲು ತೀರ್ಮಾನಿಸಲಾಗಿದೆ.
ಎನ್ಡಿಆರ್ಎಫ್, ಎಸ್ಡಿಎಫ್ ಮತ್ತು ಇತರೆ ರಕ್ಷಣಾ ತಂಡಗಳು ಹಾಗೂ 10 ಅಗ್ನಿಶಾಮಕ ದಳದ ವಾಹನಗಳು ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸಿದ್ದವು. ಸ್ಫೋಟಕ್ಕೆ ಕಾರಣವೇನೆಂದು ತನಿಖೆ ಮಾಡಲಾಗುತ್ತಿದ್ದು, ಘಟನೆ ಬಗ್ಗೆ ವರದಿ ನೀಡುವಂತೆ ಸಿಎಂ ರೇವಂತ್ ರೆಡ್ಡಿ ಸೂಚಿಸಿದ್ದಾರೆ.
