ಕೆ.ಆರ್.ಪೇಟೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಂಸ್ಕಾರ ಹಾಗೂ ಆಚಾರ, ವಿಚಾರಗಳನ್ನು ಅಳವಡಿಸಿಕೊಂಡರೆ ಬದುಕು ಪರಿಪೂರ್ಣವಾಗುತ್ತದೆ ಎಂದು ಕೋಡಿಮಠದ ಪೀಠಾಧ್ಯಕ್ಷರಾದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಹೇಳಿದರು.
ತಾಲ್ಲೂಕು ಅಕ್ಕಿಹೆಬ್ಬಾಳು ಹೋಬಳಿಯ ಚೌಡಸಮುದ್ರ ಗ್ರಾಮದಲ್ಲಿ ಕೆ.ಆರ್.ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನೇ ಸಂಯುಕ್ತ ಆಶ್ರಯದಲ್ಲಿ ವಿಶೇಷ ವಾರ್ಷಿಕ ಶಿಬಿರ 2025-26 ನೇ ಸಾಲಿನ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.ಯಶಸ್ಸು ನಿಮ್ಮ ಪರಿಶ್ರಮದ ಮೇಲೆ ನಿಂತಿರುತ್ತದೆ. ಪ್ರಯತ್ನ ಇದ್ದರೆ ಫಲವನ್ನು ಪಡೆಯಬಹುದು. ಇಂದಿನ ಯುವಕರಿಗೆ ಅವರಲ್ಲಿರುವ ಶಕ್ತಿಯ ಬಗ್ಗೆ ಅರಿವೇ ಇರುವುದಿಲ್ಲ. ಅದನ್ನು ಗುರುತಿಸುವ ಉಪನ್ಯಾಸಕರು, ಪಾಲಕರು,ಗುರು ಹಿರಿಯರ ಮಾತನ್ನು ಪಾಲಿಸಬೇಕು, ವಿದ್ಯಾರ್ಥಿಗಳು ದುಶ್ಚಟಗಳಿಗೆ ದಾಸರಾಗದೆ ಶಿಸ್ತಿನ ಜೀವನ ನಡೆಸಬೇಕು. ಶ್ರಮದಾನ ಮಾಡಿದರೆ ಸಾರ್ವಜನಿಕ ಜೀವನದಲ್ಲಿ ರಾಷ್ಟ್ರಸೇವೆ ಮಾಡಿದಂತೆ ಮಂದೆ ಜನಪ್ರತಿನಿಧಿಯಾಗುವ ಎಲ್ಲ ಅರ್ಹತೆಗಳು ದೊರಕಿದಂತೆ ಪಾಲಕರು ಮಕ್ಕಳ ಸಾಮರ್ಥ್ಯ ಗುರುತಿಸಿ, ಪ್ರೋತ್ಸಾಹ ನೀಡುವ ಮೂಲಕ ಕೆಟ್ಟದಾರಿಗೆ ಹೋಗದಂತೆ ಜಾಗ್ರತೆ ವಹಿಸಬೇಕು. ಯುವಜನತೆ ಕೆಟ್ಟ ಅಭ್ಯಾಸಗಳಿಂದ ದೂರವಿರಬೇಕು ಎಂದರೆ ಶಿಕ್ಷಣದಿಂದ ಮಾತ್ರ ಸಾಧ್ಯ ಮಹಾತ್ಮ ಗಾಂಧೀಜಿ ಅವರ ಕನಸಿನಂತೆ ವಿದ್ಯಾರ್ಥಿಗಳಲ್ಲಿ ನಾಯಕತ್ವ ಬೆಳವಣಿಗೆ, ಸಾಮಾಜಿಕ ಜವಾಬ್ದಾರಿ, ವ್ಯಕ್ತಿತ್ವ ವಿಕಸನ ಸೇರಿದಂತೆ ಅನೇಕ ವಿಚಾರಗಳನ್ನು ಎನ್ಎಸ್ಎಸ್ ಶಿಬಿರದಲ್ಲಿ ತಿಳಿದುಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.ಇಂದಿನ ಯುವ ಪೀಳಿಗೆ ತಂದೆ ತಾಯಿಗಳನ್ನು ಕೇವಲವಾಗಿ ಕಾಣುತ್ತಿದ್ದಾರೆ.ತಾಯಿ ತಂದೆಯಯರ ಬೆಲೆ ಅವರು ಕಣ್ಣ ಮುಂದೆ ಇದ್ದಾಗ ತಿಳಿಯದು ಆದ್ದರಿಂದ ನೀವೆಲ್ಲಾ ಅವರ ಭಾವನೆಗಳನ್ನು ಅರ್ಥ ಮಾಡಿಕೊಂಡು ಅವರ ಮನಸ್ಸಿಗೆ ನೋವಾಗದಂತೆ ನಡೆಯಬೇಕು, ಶ್ರೀ ಗಳು ತಂದೆ ತಾಯಿ ಗುರುವಿಗೆ ಗೌರವ ನೀಡುತ್ತಾ ಗುಣಮಟ್ಟದ ಶಿಕ್ಷಣಕ್ಕೆ ಮಾತ್ರ ಆದ್ಯತೆ ನೀಡಬೇಕು ಎಂದ ಶ್ರೀಗಳು ಕೆಲವು ನೈಜ ಘಟನೆಗಳನ್ನು ವಿವರಿಸುವ ಮೂಲಕ ವಿದ್ಯಾರ್ಥಿಗಳಿಗೆ ಮನಮುಟ್ಟುವ ಹಾಗೆ ಪ್ರೇರಣಾದಾಯಕವಂತಹ ಆಶೀರ್ವಚನವನ್ನು ವಿದ್ಯಾರ್ಥಿಗಳಿಗೆ ನೀಡಿದರು.
*ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್* ಉತ್ತಮ ಶಿಕ್ಷಣದ ಜೊತೆಗೆ ಇಂತಹ ಉಪಯುಕ್ತ ಶಿಬಿರಗಳಲ್ಲಿ ಭಾಗವಹಿಸಿದರೆ ಪ್ರಸುತ್ತ ಸಮಾಜದಲ್ಲಿ ವಿದ್ಯಾರ್ಥಿಗಳಲ್ಲಿ ಮೇಲು-ಕೀಳು ಎಂಬುದನ್ನು ದೂರಮಾಡಿ,ಗ್ರಾಮೀಣ ಭಾಗದ ಸಮಸ್ಯೆಗಳನ್ನು ಅರಿತುಕೊಂಡು ಇಲ್ಲಿಯ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದ ಅವರು ನಾನು ಹಲವು ಇಂತಹ ಉಪಯುಕ್ತ ಶಿಬಿರಗಳನ್ನು ನೋಡಿದೆ ಆದರೆ ಚೌಡಸಮುದ್ರದಲ್ಲಿ ನಡೆಯುತ್ತಿರುವ ಈ ಶಿಬಿರ ವಿಭಿನ್ನವಾಗಿದೆ, ಏಕೆಂದರೆ ಶಿಕ್ಷಣದ ಜೊತೆಗೆ ಧಾರ್ಮಿಕ ಅರಿವು ಗಟ್ಟಿಗೊಳಿಸಲು ಕೋಡಿಮಠದ ಪೀಠಾಧ್ಯಕ್ಷರಾದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ಹಾಗೂ ತಂಡೆಕೆರೆ ಮಠದ ಶ್ರೀ ಶ್ರೀ ಗಂಗಾಧರ ಶಿವಾಚಾರ್ಯ ಸ್ವಾಮೀಗಳ ದಿವ್ಯ ಆಶೀರ್ವಚನ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಸಹಕಾರಿಯಾಗಲಿದೆ ಎಂದರು.
*ಬಳಿಕ ಮಾತನಾಡಿದ ತಂಡೆಕೆರೆ ಮಠದ ಶ್ರೀ ಗಂಗಾಧರ ಶಿವಾಚಾರ್ಯ ಸ್ವಾಮೀಗಳು* ಕನಸುಗಳನ್ನು ಹೊತ್ತು ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಪರಿಶ್ರಮದಿಂದ ಸಾಧನೆಗೈದು ಕಹಿ ನೆನಪುಗಳನ್ನು ಮರೆತು ಸಿಹಿ ನೆನಪುಗಳೊಂದಿಗೆ ತೆರಳಬೇಕು ಎಂದು ಉಪನ್ಯಾಸನ ನೀಡಿದರು.
ಕಾರ್ಯಕ್ರಮಕ್ಕೆ ಆಗಮಿಸಿದ ಕೋಡಿಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ,ತಂಡೆಕೆರೆ ಮಠದ ಶ್ರೀ ಶ್ರೀ ಗಂಗಾಧರ ಶಿವಾಚಾರ್ಯ ಸ್ವಾಮೀಗಳು ಮುಖ್ಯ ಅತಿಥಿಗಳನ್ನು ಕಾಲೇಜಿನ ಆಡಳಿತ ವರ್ಗ ಗ್ರಾಮಸ್ಥರು ಅದ್ದೂರಿಯಾಗಿ ಪೂರ್ಣ ಕುಂಭ ಕಳಸ ಹಾಗೂ ಮಂಗಳವಾದ್ಯ ಚಿನ್ನ ಮಾದರಿಯ ರಥದ ಮೂಲಕ ಗ್ರಾಮದ ರಾಜ ಬೀದಿಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಈ ಸಂದರ್ಭದಲ್ಲಿ ತಾ.ಪಂ ಮಾಜಿ ಸದಸ್ಯ ಸಾಸಲು ಈರಪ್ಪ, ಕಾಂಗ್ರೆಸ್ ಯುವ ಮುಖಂಡ ದೇವರಳ್ಳಿ ಮಹೇಂದ್ರ, ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕ ಲಕ್ಷ್ಮಿಪುರ ಚಂದ್ರೆಗೌಡ,ಸರ್ಕಾರಿ ಇಂಜಿನಿಯರ್ ಕಾಲೇಜು ಪ್ರಾಂಶುಪಾಲ ಡಾ:ದಿನೇಶ್, ನಾಗೇಶ್ ಬಾಬು,ಪ್ರಕಾಶ್, ನಿವೃತ್ತ ಶಿಕ್ಷಕ ಶಿವಪ್ಪ, ರಾಜಪ್ಪ, ಶಿವಪ್ಪ,ಚಂದ್ರು,ಚೌಡಸಮುದ್ರ ಗ್ರಾಮದ ಹಿರಿಯ -ಕಿರಿಯ ಮುಖಂಡರು ಸೇರಿದಂತೆ ಉಪಸ್ಥಿತರಿದ್ದರು.
*ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ*
