ಹೇಮಾವತಿ ಲಿಂಕ್ ಕೆನಾಲ್ ವಿರೋಧಿ ಹೋರಾಟ ತೀವ್ರ, ಹೆದ್ದಾರಿ ರಸ್ತೆ ತಡೆದು ಭಾರೀ ಪ್ರತಿಭಟನೆ!

ಹೇಮಾವತಿ ಲಿಂಕ್‌ ಕೆನಾಲ್‌ ಮೂಲಕ ನೀರು ತೆಗೆದುಕೊಂಡು ಮಾಗಡಿ, ರಾಮನಗರಕ್ಕೆ ಹೋದರೆ ತುಮಕೂರು ಜನರಿಗೆ ಅನ್ಯಾಯವಾಗಲಿದೆ. ಸರ್ಕಾರ ಯಾವುದೇ ಮುಂದಾಲೋಚನೆ ಇಲ್ಲದೆ ಯೋಜನೆ ಜಾರಿಗೊಳಿಸಿದೆ. ಇದೊಂದು ಅವೈಜ್ಞಾನಿಕ ಕಾಮಗಾರಿ. ಕೂಡಲೇ ಎಲ್ಲ ಕೆಲಸಗಳನ್ನು ಸ್ಥಗಿತಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.