
ಬೆಂಗಳೂರಿನ ಅರಮನೆ ಜಾಗದ ವಿಚಾರವಾಗಿ ಮೈಸೂರು ರಾಜ ಮನೆತನದವರಿಗೂ ಹಾಗೂ ರಾಜ್ಯ ಸರ್ಕಾರದ ಮಧ್ಯ ಸಂಘರ್ಷಕ್ಕೆ ಇದೀಗ ಸುಪ್ರೀಂ ಕೋರ್ಟ್ ಅಂತ್ಯ ಹಾಡಿದ್ದು, ರಸ್ತೆ ನಿರ್ಮಾಣ ಉದ್ದೇಶಕ್ಕೆ ಕರ್ನಾಟಕ ಸರ್ಕಾರವು ಬಳಸಲು ಉದ್ದೇಶಿಸಿದ್ದ, ಮೈಸೂರು ರಾಜ ವಂಶಸ್ಥರಿಗೆ ಸೇರಿದ ಬೆಂಗಳೂರಿನ ಅರಮನೆ ಜಾಗಕ್ಕೆ ಟಿಡಿಆರ್ ಪಾವತಿಸುವಂತೆ ತಾನು ಈ ಹಿಂದೆ ನೀಡಿದ್ದೆ ಆದೇಶದಲ್ಲಿ ಚರ್ಚೆ ಅಥವಾ ಮರುಪರಿಶೀಲನೆಗೆ ಆಸ್ಪದವೇ ಇಲ್ಲ.
ರಾಜ್ಯ ಸರ್ಕಾರಕ್ಕೆ ನಾವು ಈಗಾಗಲೇ ಈ ಕುರಿತು ಆದೇಶ ಹೊರಡಿಸಿದ್ದೇವೆ. ಇದನ್ನು ನಿಮ್ಮ ಅಧಿಕಾರಿಗಳು ಪಾಲಿಸಲೇಬೇಕು. ಇಲ್ಲದೇ ಹೋದಲ್ಲಿ ಅವರು ಸಂಕಷ್ಟಕ್ಕೆ ಸಿಕ್ಕಿಹಾಕಿಕೊಳ್ಳುತ್ತಾರೆ ಎಂದು ಸುಪ್ರೀಂಕೋರ್ಟ್ ಎಚ್ಚರಿಸಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮೈಸೂರು ರಾಜ ವಂಶಸ್ಥರಿಗೆ ಸೇರಿದ ಬೆಂಗಳೂರಿನ ಅರಮನೆ ಜಾಗಕ್ಕೆ ಟಿಡಿಆರ್ ಪಾವತಿಸುವಂತೆ ಸೂಚಿಸಿದೆ.
ಸುಪ್ರೀಂ ಕೋರ್ಟ್ ನ ಈ ಒಂದು ಸೂಚನೆಗೆ ಸಹಸ್ರಾರು ಕೋಟಿ ರೂ.ಮೊತ್ತದ ಟಿಡಿಆರ್ ಪರಿಹಾರ ಪಾವತಿಯಿಂದ ತಪ್ಪಿಸಿಕೊಳ್ಳಲು ಸುಗ್ರೀವಾಜ್ಞೆ ಅಸ್ತ್ರದ ಮೊರೆ ಹೋಗಿದ್ದ ಕರ್ನಾಟಕ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ. ಗುರುವಾರ ಸುಪ್ರೀಂಕೋರ್ಟ್ನಲ್ಲಿ ನ್ಯಾ.ಎಂ.ಎಂ. ಸುಂದರೇಶ್, ನ್ಯಾ. ಅರವಿಂದ್ ಕುಮಾರ್ ಅವರಿದ್ದ ನ್ಯಾಯಪೀಠದ ಮುಂದೆ ಕರ್ನಾಟಕ ಸರ್ಕಾರದ ಪರ ವಕೀಲರಾದ ಕಪಿಲ್ ಸಿಬಲ್ ಮತ್ತು ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.
ನಾವು ಇತ್ತೀಚೆಗೆ ಹೊರಡಿಸಿದ ಸುಗ್ರೀ ವಾಜ್ಞೆ ಜಾರಿಯಲ್ಲಿ ಇರುವವರೆಗೂ ಅಥವಾ ಅದನ್ನು ರದ್ದುಪಡಿಸುವವರೆಗೂ ನಾವು ಭೂಮಿಯನ್ನು ಬಳಸಿಕೊಳ್ಳಲು ಹೋಗುವು ದಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಆದರೆ ಇದಕ್ಕೆ ಮೈಸೂರು ಅರಮನೆ ಪರ ವಕೀಲರು ತಿರುಗೇಟು ನೀಡಿದರು. ಮಧ್ಯಪ್ರವೇಶಿಸಿದ ನ್ಯಾಯಪೀಠ, ಟಿಡಿಆರ್ ಹಸ್ತಾಂತರ ಕುರಿತ ನಮ್ಮ ಹಿಂದಿನ ಆದೇಶ ಮರುಪರಿಶೀಲನೆ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿತು.