ತುಮಕೂರು: ತುಮಕೂರು ನಗರಕ್ಕೆ ಶ್ರೀ ವಿದ್ಯೋದಯ ಕಾನೂನು ಕಾಲೇಜಿನ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕರ್ನಾಟಕ ಉಚ್ಛ ನ್ಯಾಯಾಲಯ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಅವರನ್ನು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷಕರು ಮತ್ತು ಪದಾಧಿಕಾರಿಗಳು ಭೇಟಿ ಮಾಡಿ, ವಕೀಲರ ಕುಂದುಕೊರತೆ ಹಾಗೂ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನ್ಯಾಯಮೂರ್ತಿಗಳ ಗಮನ ಸೆಳೆದರು.

ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ರವರನ್ನು ಜಿಲ್ಲಾ ವಕೀಲರ ಸಂಘದಿಂದ ಅಧ್ಯಕ್ಷರಾದ ಹೆಚ್.ಕೆಂಪರಾಜಯ್ಯ, ಪ್ರಧಾನ ಕಾರ್ಯದರ್ಶಿ ಹಿರೇಹಳ್ಳಿ ಮಹೇಶ್,ಖಜಾಂಚಿ ಶ್ರೀಮತಿ ಸಿಂಧೂಮಲ್ಲಿಕಾರ್ಜುನ್,ಗೋವಿಂದರಾಜು ಹಾಗೂ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ರಾಜ್ಯ ವಕೀಲರ ಪರಿಷತ್ ಸದಸ್ಯರಾದ ಎಂ.ಎನ್.ಮಧುಸೂಧನ್,ವಿದ್ಯೋದಯ ಕಾನೂನು ಕಾಲೇಜಿನ ಆಡಳಿತ ಮತ್ತು ಶೈಕ್ಷಣಿಕ ನಿರ್ದೇಶಕರಾದ ಹೆಚ್.ಎಸ್.ರಾಜು ಇತರರು ಉಪಸ್ಥಿತರಿದ್ದರು.
– ಚಂದ್ರಚೂಡ ಕೆ.ಬಿ.
