ತುಮಕೂರು: ನಗರದ ಶ್ರೀ ಸಿದ್ಧಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ 23ನೇ ವರ್ಷದ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ ಹಾಗೂ ಸನ್ಮಾನ ಸಮಾರಂಭವನ್ನು ದಿನಾಂಕ:20-09-2026ನೇ ಭಾನುವಾರ, ಕಾಲೇಜಿನ ಆವರಣದಲ್ಲಿರುವ ಡಾ|| ಶ್ರೀ.ಶ್ರೀ.ಶಿವಕುಮಾರಸ್ವಾಮೀಜಿಗಳ ಸಭಾಂಗಣದಲ್ಲಿ ಬೆಳಿಗ್ಗೆ:10-30 ಗಂಟೆಗೆ ಸಂಘದ ಅಧ್ಯಕ್ಷರಾದ ಡಾ||ಜಿ.ಆರ್.ರೇವಣ್ಣಸಿದ್ಧಪ್ಪರವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದೆ.
ಮುಖ್ಯ ಅತಿಥಿಗಳಾಗಿ ದಾವಣಗೆರೆ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ||ಬಿ.ಇ.ರಂಗಸ್ವಾಮಿ, ಸಿದ್ಧಗಂಗಾ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ||ಹೆಚ್.ಪಿ.ವೀರಭದ್ರಸ್ವಾಮಿ, ಹಿರಿಯ ವಿದ್ಯಾರ್ಥಿಗಳ ಸಂಘದ ನಿಕಟಪೂರ್ವ ಅಧ್ಯಕ್ಷರು ಹಾಗೂ ನಿವೃತ್ತ ಪ್ರಾಂಶುಪಾಲರಾದ ಡಾ||ಟಿ.ಬಿ.ನಿಜಲಿಂಗಪ್ಪ ರವರುಗಳು ಆಗಮಿಸಲಿದ್ದಾರೆ. ಮತ್ತು ಈ ಸಂದರ್ಭದಲ್ಲಿ ವಿವಿಧ ವಿಭಾಗಗಳಲ್ಲಿ, ವಿವಿಧ ವಿಷಯಗಳಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ, ಉತ್ತಮ ಸಾಧನೆಗೈದ ಎನ್.ಎಸ್.ಎಸ್, ಎನ್.ಸಿ.ಸಿ, ಕ್ರೀಡಾ ವಿಜೇತ ವಿದ್ಯಾರ್ಥಿಗಳನ್ನು, ರ್ಯಾಂಕ್ ವಿಜೇತರಿಗೆ ನಗದು ಮತ್ತು ನೆನಪಿನ ಕಾಣಿಕೆ ನೀಡಿ ಸಂಘದ ವತಿಯಿಂದ ಗೌರವಿಸಲಾಗುವುದು.
ಈ ಕಾರ್ಯಕ್ರಮಕ್ಕೆ ಕಾಲೇಜಿನ ಎಲ್ಲಾ ಹಳೆಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಹಳೆಯ ವಿದ್ಯಾರ್ಥಿಗಳ ಸಂಘದ ಪತ್ರಿಕಾ ಕಾರ್ಯದರ್ಶಿ ಕೆ.ಬಿ.ಚಂದ್ರಚೂಡ ಕೋರಿದ್ದಾರೆ.
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: ಕೆ.ಬಿ.ಚಂದ್ರಚೂಡ(ಪಿ.ಆರ್.ಓ)ಮೊ:9448661446, ಪ್ರೊ.ಲಿಂಗದೇವರಪ್ಪ.ಕೆ.ಎಸ್. (ಕಾರ್ಯದರ್ಶಿ) ಮೊ: 9632246106
– ಚಂದ್ರಚೂಡ ಕೆ.ಬಿ.
