ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣರವರು ಮಾತನಾಡುತ್ತಾ ಜ್ಞಾನವಿಕಾಸ ಕಾರ್ಯಕ್ರಮ ದಡಿಯಲ್ಲಿ ಬರುವ ವಾತ್ಸಲ್ಯ ಕಾರ್ಯಕ್ರಮದಲ್ಲಿ ನಿರ್ಗತಿಕರಿಗೆ ಪ್ರತಿ ತಿಂಗಳು ಮಾಶಾಸನ ಮತ್ತು ಇರಲು ಸೂರು ಇಲ್ಲದವರಿಗೆ ಮನೆನಿರ್ಮಾಣ ಮಾಡುವ ಕೆಲಸವನ್ನು ಧರ್ಮಸ್ಥಳ ಸಂಸ್ಥೆ ಮಾಡುತ್ತಿದ್ದು ಅನ್ನದಾನ, ವಿದ್ಯಾದಾನ, ಔಷಧದಾನ ಮತ್ತು ಅಭಯದಾನ ಎಂಬ ಚತುರ್ದಾನಗಳ ಬಗ್ಗೆ ಹೇಳುತ್ತಾ ನಿರ್ಗತಿಕರಿಗೆ ನಿಮ್ಮ ಜೊತೆ ನಾವಿದ್ದೇವೆ ಎಂಬ ಧೈರ್ಯ ನೀಡುವುದೇ ಈ ಯೋಜನೆಯ ಗುರಿ ಎಂದು ತಿಳಿಸಿದರು.
ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಕಾಮರಾಜ್ರವರು ಮಾತನಾಡುತ್ತ ಸರ್ಕಾರ ಮಾಡಲು ಸಾಧ್ಯವಾಗದ ಎಷ್ಟೋ ಕೆಲಸಗಳನ್ನು ಧರ್ಮಸ್ಥಳ ಸಂಸ್ಥೆ ಮಾಡುತ್ತಾ ಬರುತ್ತಿದೆ ಇಂತಹ ಸಮಾಜಮುಖಿ ಕಾರ್ಯಕ್ರಮಗಳು ಬಡವರಿಗೆ ನಿರ್ಗತಿಕರಿಗೆ ಆಸರೆ ಆಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಯೋಜನಾಧಿಕಾರಿ ಪ್ರಭಾಕರ್ ರಾಮ್ ನಾಯಕ್, ಹೊಳಕಲ್ ಗ್ರಾ.ಪಂ.ಅಧ್ಯಕ್ಷರಾದ ಆಂಜಿನಪ್ಪ, ಗ್ರಾ.ಪಂ.ಸದಸ್ಯರಾದ ಶ್ರೀನಿವಾಸ್, ನಾರಾಯಣ, ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರೀಮತಿರೇಖಾ, ವಲಯದ ಮೇಲ್ವಿಚಾರಕರಾದ ಕು||ತನುಜಾ, ಸೇವಾಪ್ರತಿನಿಧಿ ಹೇಮಾ, ಊರಿನ ಗಣ್ಯರು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.
– ಚಂದ್ರಚೂಡ ಕೆ.ಬಿ.
