ತುಮಕೂರು: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಭೀಮಸಂದ್ರ ವಲಯದ ಸದಾಶಿವನಗರ ಕಾರ್ಯಕ್ಷೇತ್ರದ ಬಾಂಧವ್ಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಶ್ರೀದೇವಿ ವಿಜ್ಞಾನ ಸಂಸ್ಥೆ ಮತ್ತು ಸಂಶೋಧನಾ ಆಸ್ಪತ್ರೆ ಇವರ ಸಹಯೋಗದೊಂದಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜೈಪುರ ವಿಭಾಗದ ಮಾಜಿ ಮೇಯರ್ ಪ್ರಭಾವತಿರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.
ಕಾರ್ಯಕ್ರಮವನ್ನು ಕುರಿತು ತಾಲೂಕಿನ ಯೋಜನಾಧಿಕಾರಿಗಳಾದ ಪಿ.ಬಿ.ಸಂದೇಶ್ ರವರು ಪ್ರಾಸ್ತಾವಿಕವಾಗಿ ಯೋಜನೆಯಲ್ಲಿರುವ ಕಾರ್ಯಕ್ರಮಗಳ ಬಗ್ಗೆ ತಿಳಿಸುತ್ತಾ ಕ್ಷೇತ್ರದಲ್ಲಿ ಪ್ರತಿದಿನ ನಡೆಯುವ ಅನ್ನದಾನ, ವಿದ್ಯಾದಾನ, ಅಭಯದಾನ ಹಾಗೂ ಔಷಧದಾನಗಳ ಬಗ್ಗೆ ತಿಳಿಸಿದರು. ಇತ್ತೀಚಿನ ದಿನದಲ್ಲಿ ಆರೋಗ್ಯದ ಸಮಸ್ಯೆಗಳ ಬಗ್ಗೆ ತಿಳಿಸುತ್ತಾ ಪ್ರತಿದಿನ ನಾವು ಸೇವಿಸುವ ಆಹಾರ ಪದ್ಧತಿ ಮತ್ತು ಕುಡಿಯುವ ನೀರಿನ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಹಾಗೂ ಆರೋಗ್ಯದ ಬಗ್ಗೆ ಗಮನಹರಿಸಬೇಕು ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಜಿಲ್ಲಾ ಕೋ-ಆರ್ಡಿನೇಟರ್ ಶಶಿಧರ್ ರವರು ಇಲಾಖೆಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮಾತೃವಂದನ, ಸುಕನ್ಯಾ ಸಮೃದ್ಧಿ, ಭಾಗ್ಯಲಕ್ಷ್ಮಿ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಜೈಪುರ ವಿಭಾಗದ ಸರ್ಕಾರಿ ವಕೀಲರಾದ ನಾಗೇಶ್ ರವರು ಕ್ಷೇತ್ರದಲ್ಲಿ ನಡೆಯುತ್ತಿರುವ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಾಜಿ ಮೇಯರ್ ಪ್ರಭಾವತಿರವರು ಕಾರ್ಯಕ್ರಮವನ್ನು ಕುರಿತು ಶುಭ ಹಾರೈಕೆ ನುಡಿದರು. ಈಸಂದರ್ಭದಲ್ಲಿ ವಲಯದ ಮೇಲ್ವಿಚಾರಕರಾದ ಸಿದ್ದರಾಜು,ಜ್ಞಾನವಿಕಾಸ ಸಮನ್ವಯಾಧಿಕಾರಿ ನೇತ್ರ ಹಾಗೂ ಸೇವಾ ಪ್ರತಿನಿಧಿ ಶಶಿಕಲಾ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.
– ಚಂದ್ರಚೂಡ ಕೆ.ಬಿ.
