ತುಮಕೂರು:ತುಮಕೂರಿನ ಅಕ್ಷಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವತಿಯಿಂದ ವಿಜ್ಞಾನ ಮತ್ತು ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಉದಯೋನ್ಮುಖ ತಂತ್ರಜ್ಞಾನಗಳು ಹಾಗೂ ನವೀನ ಸಂಶೋಧನೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಎಮರ್ಜಿಂಗ್ ಟೆಕ್ನೋಲಜಿಸ್ ಇನ ಸೈನ್ಸ್ ಅಂಡ್ ಇಂಜಿನಿಯರಿಂಗ್ ಎಂಬ ವಿಷಯದಡಿ ಎರಡು ದಿನಗಳ ಅಂತರರಾಷ್ಟ್ರೀಯ ತಾಂತ್ರಿಕ ಸಮ್ಮೇಳನವನ್ನು ನವೆಂಬರ್ 26 ಮತ್ತು 27ರಂದು ಆಯೋಜಿಸಲಾಗುತ್ತಿದೆ ಎಂದು ಅಕ್ಷಯ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಲ್.ಯತೀಶ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಈ ಸಮ್ಮೇಳನಕ್ಕೆ ದೇಶ-ವಿದೇಶಗಳ ವಿವಿಧ ವಿಶ್ವವಿದ್ಯಾಲಯಗಳು, ಸಂಶೋಧನಾ ಸಂಸ್ಥೆಗಳು ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಂಶೋಧಕರು ಮತ್ತು ಪ್ರಾಧ್ಯಾಪಕರಿಂದ ಸುಮಾರು 250 ಸಂಶೋಧನಾ ಪ್ರಬಂಧಗಳು ಮಂಡನೆಯಾಗಲಿವೆ ಎಂದರು.

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಹೊಸ ಆವಿಷ್ಕಾರಗಳು ನಡೆಯುತ್ತಿದ್ದು ಅವುಗಳನ್ನು ಸಂಶೋಧನೆ ಮತ್ತು ಶಿಕ್ಷಣದೊಂದಿಗೆ ಸಮನ್ವಯಗೊಳಿಸುವುದು ಇಂದಿನ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಅಂತರರಾಷ್ಟ್ರೀಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ. ದೇಶ-ವಿದೇಶಗಳಿಂದ 250 ಸಂಶೋಧನಾ ಪ್ರಬಂಧಗಳು ಸಲ್ಲಿಕೆಯಾಗಿರುವುದು ಸಮ್ಮೇಳನದ ಮಹತ್ವವನ್ನು ತೋರಿಸುತ್ತದೆ ಎಂದು ತಿಳಿಸಿದರು.
ನವೆಂಬರ್ 26 ಮತ್ತು 27ರಂದು ನಡೆಯಲಿರುವ ಈ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ವಿಜ್ಞಾನ ಮತ್ತು ಎಂಜಿನಿಯರಿಂಗ್ ಕ್ಷೇತ್ರದ ಇತ್ತೀಚಿನ ಸಂಶೋಧನೆಗಳು ಹಾಗೂ ತಾಂತ್ರಿಕ ಬೆಳವಣಿಗೆಗಳ ಕುರಿತು ಚರ್ಚೆ ನಡೆಯಲಿದೆ.ಮುಖ್ಯವಾಗಿ ಕೃತಕ ಬುದ್ಧಿಮತ್ತೆ, ಯಂತ್ರ ಕಲಿಕೆ, ಸೈಬರ್ ಭದ್ರತೆ, ಡೇಟಾ ಸೈನ್ಸ್, ಸೆಮಿಕಂಡಕ್ಟರ್ ತಂತ್ರಜ್ಞಾನ, ವಿ.ಎಲ್.ಎಸ್.ಐ. ಡಿಸೈನ್, ಇಂಟರ್ನೆಟ್ ಆಫ್ ಥಿಂಗ್ಸ್, ಆಧುನಿಕ ಎಂಜಿನಿಯರಿಂಗ್ ತಂತ್ರಜ್ಞಾನಗಳು ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಸಂಶೋಧನಾ ಪ್ರಬಂಧಗಳ ಮಂಡನೆ ಮತ್ತು ತಜ್ಞರ ಉಪನ್ಯಾಸಗಳು ನಡೆಯಲಿವೆ.
ಈ ಅಂತರರಾಷ್ಟ್ರೀಯ ಸಮ್ಮೇಳನದ ಮುಖ್ಯ ಅತಿಥಿಗಳಾಗಿ ಇನ್ಫೋಸಿಸ್ನ ಸೈಬರ್ ಸೆಕ್ಯುರಿಟಿ ವಿಭಾಗದ ಹಿರಿಯ ಸಲಹೆಗಾರರಾದ ಆದಿತ್ಯ ಆರ್. ಅರುಣಾಚಲಂ ಹಾಗೂ ತುಮಕೂರು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರಾಧಾ ಅವರು ಭಾಗವಹಿಸಲಿದ್ದಾರೆ. ಆ.ವಿಜಯಕುಮಾರ್ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಕಾಲೇಜಿನ ಅಧ್ಯಕ್ಷರಾದ ಡಾ.ಶಿವಕುಮಾರ್. ಕೆ.ಎಸ್. ಕಾರ್ಯದರ್ಶಿ ಡಾ.ಶೋಭಾ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರೊ.ರಾಕೇಶ್.ಎಸ್, ಪ್ರೊ.ಪದ್ಮಾವತಿ.ಎನ್ ಪ್ರೊ.ಕಾರ್ತಿಕ್.ಹೆಚ್.ಡಿ, ಪ್ರೊ.ಪ್ರದೀಪ್.ಎಸ್,ಅವರುಗಳು ಪಾಲ್ಗೊಳ್ಳಲಿದ್ದಾರೆ ಎಂದರು.
– ಚಂದ್ರಚೂಡ ಕೆ.ಬಿ.
