ತುಮಕೂರು : ಮಹಾತ್ಮ ಗಾಂಧಿ ಸ್ಟೇಡಿಯಂನಲ್ಲಿ ನಡೆದ ತುಮಕೂರು ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜ್ ಕ್ರೀಡಾಕೂಟದಲ್ಲಿ ತಿಪಟೂರು ತಾಲೂಕಿನ ಹೊನ್ನವಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು||ಸಂಧ್ಯಾ 100 ಮೀಟರ್ ಪ್ರಥಮ,200ಮೀಟರ್ ಪ್ರಥಮ,400 ಮೀಟರ್ನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ ಚಾಂಪಿಯನ್ ಶಿಪ್ ಪಡೆದು ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ,ಕು|ಸಂಧ್ಯಾರವರನ್ನು ಶಾಸಕರಾದ ಸಿ.ಬಿ.ಸುರೇಶ್ ಬಾಬು,ಕಾಲೇಜಿನ ಪ್ರಾಚಾರ್ಯರು,ಉಪನ್ಯಾಸಕರು,ವಿವಿಧ ಸಂಘ-ಸಂಸ್ಥೆಯ ಪದಾಧಿಕಾರಿಗಳು,ಪತ್ರಕರ್ತರು ಅಭಿನಂದನೆ ತಿಳಿಸಿದ್ದಾರೆ.
