ತುಮಕೂರು: ನವರಾತ್ರಿ ಹಬ್ಬದ ಅಂಗವಾಗಿ ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ನ್ಯಾಯಾಧೀಶರು ಹಾಗೂ ಮಹಿಳಾ ಸಿಬ್ಬಂದಿ ಹಸಿರು ಸೀರೆ ಧರಿಸಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನರಸಮ್ಮ ಎನ್., 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಿಲ್ಪಾ ಕೆ.ಎಸ್., 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಯಾಸ್ಮೀನ್ ಪರ್ವೀನ್ ಲಡ್ಕಾನ್ ಸೇರಿದಂತೆ ಮಹಿಳಾ ಸಿಬ್ಬಂದಿ ಉಪಸ್ಥಿತರಿದ್ದರು.
– ಕೆ.ಬಿ.ಚಂದ್ರಚೂಡ
