ತುಮಕೂರು:ಆಗ್ನೇಯ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಚುನಾಯಿತರಾದ ಕೆ.ಎಂ. ಸುರೇಶ್ ಅವರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರೊಂದಿಗೆ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ಜೊತೆ ಶುಕ್ರವಾರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ಧಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದರು.
ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಕೆ.ಎಂ.ಸುರೇಶ್ ಅವರು 23 ಸಾವಿರಕ್ಕೂ ಹೆಚ್ಚು ದಾಖಲೆ ಮತಗಳ ಅಂತರದಿಂದ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದು ಬಿಜೆಪಿ, ಜೆಡಿಎಸ್ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿತ್ತು.
ಶ್ರೀಮಠದಲ್ಲಿ ಡಾ.ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.ನಂತರ ಸಿದ್ಧಲಿಂಗ ಸ್ವಾಮೀಜಿಗಳ ದರ್ಶನ ಮಾಡಿ ಆಶೀರ್ವಾದ ಪಡೆದರು.
ಈ ವೇಳೆ ಶಾಸಕ ಜಿ.ಬಿ. ಜ್ಯೋತಿಗಣೇಶ್, ಜೆಡಿಎಸ್ನ ಹಿರಿಯ ಮುಖಂಡ ಟಿ.ಎಲ್.ಕುಂಭಯ್ಯ, ಜಿಲ್ಲಾ ಕಾರ್ಯಾಧ್ಯಕ್ಷ ಟಿ.ಆರ್. ನಾಗರಾಜು, ಜೆಡಿಎಸ್ ನಗರ ಅಧ್ಯಕ್ಷ ಟಿ.ಹೆಚ್.ಜಯರಾಮ್, ನಗರಕಾರ್ಯಾಧ್ಯಕ್ಷ ಟಿ.ಎಸ್.ಮೋಹನ್ಕುಮಾರ್, ಬಿಜೆಪಿ ನಗರ ಅಧ್ಯಕ್ಷ ಧನುಷ್, ನಗರ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್. ವಿರೂಪಾಕ್ಷಪ್ಪ, ಮಹಿಳಾ ಮೋರ್ಚಾ ನಗರ ಅಧ್ಯಕ್ಷೆ ಬಿ.ಹೆಚ್.ವಸಂತ, ಮುಖಂಡರಾದ ಟಿ.ಆರ್.ಸದಾಶಿವಯ್ಯ, ಹಿರಿಯ ವಕೀಲರಾದ ಡಿ.ಸಿ.ಹಿಮಾನಂದ್,ಸಿ.ಎಸ್.ಕುಮಾರಸ್ವಾಮಿ ಉಮಾಮಹೇಶ್,ಕುಮಾರಸ್ವಾಮಿ, ಸುನಿಲ್, ಗಣೇಶ್ ಮೊದಲಾದವರು ಹಾಜರಿದ್ದರು.
– ಚಂದ್ರಚೂಡ ಕೆ.ಬಿ.
