ತುಮಕೂರು:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ತುಮಕೂರು ತಾಲೂಕು ವತಿಯಿಂದ ರಾಮನಹಳ್ಳಿ ಗ್ರಾಮದಲ್ಲಿ ರೈತ ಕ್ಷೇತ್ರ ಪಾಠಶಾಲೆ ಮಾಹಿತಿ ಕಾರ್ಯಕ್ರಮದಡಿಯಲ್ಲಿ ಕೃಷಿ ನೀರಾವರಿ ಮತ್ತು ಸಾವಯುವ ಕೃಷಿ ಬಗ್ಗೆ ಕೃಷಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮದಲ್ಲಿ ನಿವೃತ್ತ ಕೃಷಿ ಅಧಿಕಾರಿಗಳಾದ ರಾಜಶೇಖರಯ್ಯರವರು ನೀರಿನ ಬಳಕೆ ಮತ್ತು ನೀರಿನ ಸಂರಕ್ಷಣೆಯಲ್ಲಿ ಕೈಗೊಳ್ಳಬಹುದಾದ ಕ್ರಮಗಳು ಮತ್ತು ವಿಧಾನಗಳು ಕುರಿತಾಗಿ ಮಾಹಿತಿ ನೀಡಿ ಕೃಷಿ ಮತ್ತು ತೋಟಗಾರಿಕೆ ಇಲಾಖೆಯಲ್ಲಿ ಲಭ್ಯವಿರುವ ನೀರಾವರಿ ಯೋಜನೆಗಳ ಸೌಲಭ್ಯತೆಗಳನ್ನು ಬಳಸಿಕೊಳ್ಳುವ ಮೂಲಕ ನೀರಿನ ಮಿತ ಬಳಕೆ ಹಾಗೂ ಹನಿ ಮತ್ತು ತುಂತುರು ನೀರಾವರಿ ವಿಧಾನಗಳ ಅನುಷ್ಠಾನ ಮಾಡುವಂತೆ ರೈತ ಮಹಿಳೆಯರಿಗೆ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ರಾಸಾಯನಿಕ ಮುಕ್ತ ಕೃಷಿ ಮಾಡಲು ಸಾವಯವ ಗೊಬ್ಬರಗಳ ತಯಾರಿಕೆ ಮತ್ತು ಅವುಗಳ ಮಹತ್ವದ ಬಗ್ಗೆ ಮಾಹಿತಿಯನ್ನು ನೀಡಿ ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆಯನ್ನು ನೀಡುವಂತೆ ಸದಸ್ಯರಲ್ಲಿ ಅರಿವು ಮೂಡಿಸಿದರು. ಈ ಸಂದರ್ಭದಲ್ಲಿ ಕೃಷಿ ಮೇಲ್ವಿಚಾರಕ ಅನುಕುಮಾರ್ ಮತ್ತು ಸೇವಾ ಪ್ರತಿನಿಧಿ ಶಾರದ ಹಾಗೂ ಸ್ವಸಹಾಯ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.
ವರದಿ : ಕೆ ಬಿ ಚಂದ್ರಚೂಡ್
