ತುಮಕೂರು: ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ ಅವರನ್ನು ಗೌರವಿಸುವಂತಹ ಹಲವು ಕಾರ್ಯಕ್ರಮಗಳನ್ನು ಬಿಜೆಪಿ ಆಯೋಜಿಸಿದೆ. ಹಲವು ವರ್ಷಗಳ ಹಿಂದೆಯೇ ಅಭಿವೃದ್ಧಿಶೀಲ ರಾಷ್ಟ್ರಕ್ಕೆ ಅಂಬೇಡ್ಕರ್ ಅಡಿಪಾಯ ಹಾಕಿದವರು. ಇದೇ ರೀತಿ ಪ್ರಧಾನಿ ನರೇಂದ್ರ ಮೋದಿ ಅವರು ಅಂಬೇಡ್ಕರ್ ಅವರ ಜೀವನಕ್ಕೆ ಸಂಬ೦ಧಿಸಿದ ಐದು ಪ್ರಮುಖ ಸ್ಥಳಗಳನ್ನು ‘ಪಂಚತೀರ್ಥ’ಗಳಾಗಿ ಅಭಿವೃದ್ಧಿಪಡಿಸಿದ್ದಾರೆ. ಇದು ಮೋದಿ ಅವರು ಅಂಬೇಡ್ಕರ್ ಅವರಿಗೆ ಕೊಟ್ಟ ಗೌರವ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು.
ಅಂಬೇಡ್ಕರ್ ಅವರು ಕೇವಲ ಸಂವಿಧಾನ ಶಿಲ್ಪಿ ಮಾತ್ರ ಅಲ್ಲ. ಅವರು ಸಾಮಾಜಿಕ ನ್ಯಾಯದ ಹರಿಕಾರರೂ ಆಗಿದ್ದರು. ಸಮಾನತೆಯ ಸಂಕೇತದ೦ತಿದ್ದರು. ಸಮಾನತೆ, ಸಮಾನ ಹಕ್ಕು ಪ್ರತಿಪಾದಿಸಿದ ಡಾ. ಅಂಬೇಡ್ಕರ್ ಅವರು ಉತ್ತಮ ಶಿಕ್ಷಣ ಪಡೆದು ಉನ್ನತ ಮಟ್ಟಕ್ಕೆ ಬೆಳೆದರು, ಶಿಕ್ಷಣದ ಮೂಲಕ ಎತ್ತರಕ್ಕೆ ಬೆಳೆಯಬಹುದು ಎನ್ನುವುದಕ್ಕೆ ಅಂಬೇಡ್ಕರ್ ಅವರೇ ಆದರ್ಶವಾಗಿದ್ದಾರೆ. ಜಾತಿ-ಜನಾಂಗದ ವ್ಯತ್ಯಾಸ ಮೀರಿ ಶಿಕ್ಷಣದ ಉನ್ನತ ಸ್ಥಾನ ಪಡೆಯಲು ಸಾಧ್ಯ ಎಂದು ತೋರಿಸಿಕೊಟ್ಟು ಶಿಕ್ಷಣದ ಮಹತ್ವ ಸಾರಿದ್ದಾರೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು.
ಡಾ.ಎಂ.ಆರ್.ಹುಲಿನಾಯ್ಕರ್, ವಿನಯ್ ಬಿದರೆ, ಸಾಗರನಹಳ್ಳಿ ವಿಜಯಕುಮಾರ್, ಗಂಗರಾಜು, ಟಿ.ಕೆ.ಧನುಷ್, ನವಚೇತನ್, ಸುಮಿತ್ರಮ್ಮ, ಸಿದ್ದರಾಮಣ್ಣ, ಅಂಜನಮೂರ್ತಿ, ಹನುಮಂತರಾಯಪ್ಪ, ಟಿ.ಹೆಚ್.ಹನುಮಂತರಾಜು, ಜ್ಯೋತಿ ತಿಪ್ಪೇಸ್ವಾಮಿ, ಗಂಗಾಧರ್, ಸತ್ಯಮಂಗಲ ಜಗದೀಶ್, ವಿರೂಪಾಕ್ಷಪ್ಪ, ಪ್ರತಾಪ್, ಪ್ರೀತಂ ಜೈನ್, ಗಣೇಶ್ಪ್ರಸಾದ್, ಬಂಬೂ ಮೋಹನ್, ಆಟೋ ಯಡಿಯೂರಪ್ಪ, ಮೊದಲಾದವರು ಭಾಗವಹಿಸಿದ್ದರು.
– ಕೆ.ಬಿ.ಚಂದ್ರಚೂಡ
