ತುಮಕೂರು:ಕೃತಕ ಬುದ್ಧಿಮತ್ತೆ ಈಗ ಎಲ್ಲಾ ಕ್ಷೇತ್ರಗಳಲ್ಲೂ ಪ್ರವೇಶ ಮಾಡುತ್ತಿದೆ. ಎ.ಐ.ಉದ್ಯೋಗ ಕಸಿಯುತ್ತಿದೆ ಎಂಬ ಅಭಿಪ್ರಾಯವೂ ಇದೆ.ಜೊತೆಗೆ ಎ.ಐ.ಬಳಸಿಕೊಂಡು ಉದ್ಯೋಗ ಸೃಷ್ಟಿ ಮಾಡಲೂ ಸಾಧ್ಯವಿದೆ ಎನ್ನುವವರೂ ಇದ್ದಾರೆ.ಎ.ಐ.ಗೆ ಸವಾಲಾಗಿ ನಿಮ್ಮ ಪ್ರಗತಿಗೆ ಎ.ಐ ಅನ್ನು ಯಾವ ರೀತಿ ಬಳಸಿಕೊಳ್ಳಬಹುದು ಎಂದು ಚಿಂತನೆ ಮಾಡಿ ಎಂದು ಸಿದ್ಧಗಂಗಾ ಮಠಾಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.
ನಗರದ ಸಿದ್ಧಗಂಗಾ ತಾಂತ್ರಿಕ ವಿದ್ಯಾಲಯದಲ್ಲಿ ನಡೆದ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸ್ವಾಮೀಜಿ, ಶಿಕ್ಷಣ ಕೇವಲ ಜ್ಞಾನ ಸಂಪಾದನೆ ಮಾತ್ರವಲ್ಲ ಉತ್ತಮ ವ್ಯಕ್ತಿತ್ವ ರೂಪಿಸುತ್ತದೆ.ಕಾಲೇಜಿನಲ್ಲಿ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ, ಯಾವ ತರಗತಿಗೂ ಗೈರುಹಾಜರಾಗದೆ ಶ್ರದ್ಧೆಯಿಂದ ಕಲಿಯಿರಿ.ಜೀವನಪೂರ್ತಿ ಕಲಿಕೆ ಉತ್ಸಾಹ ಕಳೆದುಕೊಳ್ಳಬಾರದು.ತರಗತಿಯಲ್ಲಿ ಕಲಿತಿದ್ದನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ತಮ್ಮ ಜ್ಞಾನ ಹಾಗೂ ಕಾರ್ಯ ಸಮಾಜದ ಬೆಳವಣಿಗೆಗೆ ಸಹಕಾರಿಯಾಗಬೇಕು ಎಂದು ಹೇಳಿದರು.

ಮುಖ್ಯಅತಿಥಿಯಾಗಿ ಆಗಮಿಸಿದ್ದ ಟಾಟಾಕನ್ಸಲ್ಟೆನ್ಸಿ ಸರ್ವಿಸಸ್ನ ಟ್ಯಾಲೆಂಟ್ ಅಕ್ವಿಸಿಷನ್ ಮುಖ್ಯಸ್ಥರಾದ ಗಿರೀಶ್ ನಂದಿಮಠ ಮಾತನಾಡಿ, ಇಂಜಿನಿಯರಿಂಗ್ ಪ್ರವೇಶದ ಮೂಲಕ ತಂತ್ರಜ್ಞಾನ ಕ್ಷೇತ್ರದ ಪಯಣ ಆರಂಭಿಸಿರುವ ವಿದ್ಯಾರ್ಥಿಗಳು ಕಲಿಕೆ ಜೊತೆಗೆ ಕ್ರಿಯಾಶೀಲತೆ, ತಂತ್ರಜ್ಞಾನಕೌಶಲ್ಯ ಬೆಳೆಸಿಕೊಳ್ಳಬೇಕು.ಯಶಸ್ಸು ಕೇವಲ ಅಂಕಗಳಿಗೆ ಸೀಮಿತವಾಗಿರುವುದಿಲ್ಲ. ಆನಂತರ ನೀವು ಆರಂಭಿಸುವ ಕ್ರೀಯಾಶೀಲ ಚಟುವಟಿಕೆ, ಆವಿಷ್ಕಾರ ಅವಲಂಬಿತವಾಗಿರುತ್ತದೆ.ಜಾಗತಿಕ ಮಟ್ಟದ ಸವಾಲುಗಳನ್ನು ಸಮರ್ಥವಾಗಿ ಸ್ವೀಕರಿಸುವ ಜ್ಞಾನ, ಸಾಮಥ್ಯ ಬೆಳೆಸಿಕೊಳ್ಳಲು ನಿರಂತರ ಕಲಿಕೆಯಿಂದ ಸಾಧ್ಯವಾಗುತ್ತದೆ ಎಂದು ಹೇಳಿದರು.
ಸಿದ್ಧಗಂಗಾ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯದರ್ಶಿ ಡಾ.ಶಿವಕುಮಾರಯ್ಯ ಅವರು ನೂತನ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಿದ್ಧಗಂಗಾ ಶಿಕ್ಷಣಾ ಸಂಸ್ಥೆ ಕಾರ್ಯದರ್ಶಿ ಟಿ.ಕೆ.ನಂಜುAಡಪ್ಪ ಮಾತನಾಡಿ, ಭವಿಷ್ಯದ ಕನಸು ಹೊತ್ತು ಸಿದ್ಧಗಂಗಾ ತಾಂತ್ರಿಕ ವಿದ್ಯಾಲಯ ಪ್ರವೇಶ ಮಾಡಿರುವ ನಿಮ್ಮ ಕನಸು ಸಾಕಾರಗೊಳ್ಳಲು ಸಂಸ್ಥೆಯ ಬೋಧಕರು ನಿಮಗೆ ಉತ್ತಮ ಮಾರ್ಗದರ್ಶನ ನೀಡುತ್ತಾರೆ.ಇಲ್ಲಿನ ಸೌಕರ್ಯಗಳನ್ನು ಬಳಸಿಕೊಂಡು ಶ್ರೇಷ್ಠ ಇಂಜಿನಿಯರ್ಗಳಾಗಿ ಹೊರಹೊಮ್ಮಬೇಕು.ಡಾ.ಶ್ರೀ.ಶಿವಕುಮಾರ ಸ್ವಾಮೀಜಿಗಳ ಕಾಯಕ, ದಾಸೋಹದಆಶಯದಂತೆ ಸಮಾಜದ ಏಳಿಗೆಗೆ ಶಕ್ತಿಯಾಗಬೇಕು ಎಂದರು.
ಎಸ್ಐಟಿ ಕಾಲೇಜು ಪ್ರಾಚಾರ್ಯರಾದ ಪ್ರೊ.ಎಸ್.ವಿ. ದಿನೇಶ್ ಅವರು ಮಾತನಾಡಿ, ಮೌಲ್ಯಗಳ ತಳಹದಿಯಲ್ಲಿ ನಿರ್ಮಾಣವಾಗಿರುವ ಸಿದ್ಧಗಂಗಾ ತಾಂತ್ರಿಕ ವಿದ್ಯಾಲಯದಲ್ಲಿ ಓದಿನ ಅನೇಕ ವಿದ್ಯಾರ್ಥಿಗಳು ವಿಶ್ವದಾದ್ಯಂತ ವಿವಿಧ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉನ್ನತ ಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.ನಿಮಗೂ ಅಂತಹಯಶಸ್ಸುದೊರೆಯಲಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿ, ಕಾಲೇಜಿನಲ್ಲಿ ದೊರೆಯುವ ಸೌಕರ್ಯಗಳ ಬಗ್ಗೆ ವಿವರಿಸಿದರು.
ವರದಿ : ಕೆ ಬಿ ಚಂದ್ರಚೂಡ್
