ತುಮಕೂರು: ಬಿದರಕಟ್ಟೆಯಲ್ಲಿರುವ ತುಮಕೂರು ವಿಶ್ವವಿದ್ಯಾನಿಲಯದ ನೂತನಕ್ಯಾಂಪಸ್ ‘ಜ್ಞಾನಸಿರಿ’, ಶೈಕ್ಷಣಿಕ ಭವನ ಹಾಗೂ ಇತರ ಕಟ್ಟಡಗಳ ಲೋಕಾರ್ಪಣಾ ಸಮಾರಂಭವನ್ನು ನ. 07 ರಂದು ಬೆಳಗ್ಗೆ 11-00 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ಶ್ರೀ ಥಾವರ್ಚಂದ್ಗೆಹ್ಲೋಟ್ ಅವರು ನೂತನ ಕ್ಯಾಂಪಸ್ ಲೋಕಾರ್ಪಣೆ ಮಾಡಲಿದ್ದಾರೆ.ಕರ್ನಾಟಕದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನೂತನವಾಗಿ ನಿರ್ಮಾಣಗೊಂಡಿರುವ ಶೈಕ್ಷಣಿಕ ಭವನ ಹಾಗೂ ಇತರ ಕಟ್ಟಡಗಳ ಉದ್ಘಾಟನೆ ಮಾಡಲಿದ್ದಾರೆ.
ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ. ಕೆ.ಶಿವಕುಮಾರ್, ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯಖಾತೆ ಸಚಿವರಾದ ವಿ.ಸೋಮಣ್ಣ, ಗೃಹಸಚಿವರು ಹಾಗೂ ಜಿಲ್ಲಾಉಸ್ತುವಾರಿ ಸಚಿವರಾದ ಡಾ.ಜಿ. ಪರಮೇಶ್ವರ ಅವರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಉನ್ನತ ಶಿಕ್ಷಣ ಸಚಿವರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿಗಳಾಗಿರುವ ಡಾ.ಎಂ.ಸಿ. ಸುಧಾಕರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಇದನ್ನು ಓದಿ : ತುಮಕೂರು- ಕಾಲುಬಾಯಿ ಜ್ವರದ ವಿರುದ್ಧದ ಸಾಮೂಹಿಕ ಲಸಿಕಾ ಅಭಿಯಾನಕ್ಕೆ ಡಾ. ಜಿ. ಪರಮೇಶ್ವರ್ ಚಾಲನೆ
ಕರ್ನಾಟಕ ಸರ್ಕಾರದ ನವದೆಹಲಿ ಪ್ರತಿನಿಧಿಗಳಾದ ಶ್ರೀ ಟಿ. ಬಿ.ಜಯಚಂದ್ರ, ಶಾಸಕರಾದ ಶ್ರೀ ಎಸ್.ಆರ್.ಶ್ರೀನಿವಾಸ್, ಗೋವಿಂದ ಎಂ. ಕಾರಜೋಳ, ಡಾ.ಸಿ.ಎನ್. ಮಂಜುನಾಥ್, ಕೆ.ಎನ್. ರಾಜಣ್ಣ, ಸಿ.ಬಿ. ಸುರೇಶ್ಬಾಬು, ಎಂ.ಟಿ.ಕೃಷ್ಣಪ್ಪ, ಕೆ.ಷಡಕ್ಷರಿ, ಬಿ.ಸುರೇಶ್ಗೌಡ, ಡಾ. ಹೆಚ್.ಡಿ.ರಂಗನಾಥ್, ಜಿ.ಬಿ. ಜ್ಯೋತಿಗಣೇಶ್,ಹೆಚ್.ವಿ.ವೆಂಕಟೇಶ್, ಚಿದಾನಂದ ಎಂ.ಗೌಡ, ರಾಜೇಂದ್ರ.ಆರ್., ಡಿ.ಟಿ.ಶ್ರೀನಿವಾಸ್, ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ,ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಎಂ.ವೆಂಕಟೇಶ್ವರಲು, ಕುಲಸಚಿವರಾದ ನಾಹಿದಾಜಂ ಉಪಸ್ಥಿತರಿರುವರು.
ನೂತನ ಶೈಕ್ಷಣಿಕ ಭವನವುಅಂದಾಜು 17 ಸಾವಿರಚದರ ಮೀಟರ್ ವಿಸ್ತೀರ್ಣದ್ದಾಗಿದ್ದು, ರೂ. 48.74 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದೆ.ಕರ್ನಾಟಕ ಸರ್ಕಾರದ ಎಸ್ಸಿಪಿ-ಟಿಎಸ್ಪಿ ಅನುದಾನ ಹಾಗೂ ವಿಶ್ವವಿದ್ಯಾನಿಲಯದ ಆಂತರಿಕ ಸಂಪನ್ಮೂಲದಿಂದ ನಿರ್ಮಾಣಗೊಂಡ ಕಲಾಭವನ, ರೂ. 2.5 ಕೋಟಿವೆಚ್ಚದ ಪ್ರಧಾನದ್ವಾರ ಹಾಗೂ ಆವರಣಗೋಡೆ ಕಾಮಗಾರಿಗಳು ಈ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳ್ಳಲಿವೆ.
ಜ್ಞಾನಸಿರಿ ಕ್ಯಾಂಪಸ್ನಲ್ಲಿ ವಿಪ್ರೋ ಸಂಸ್ಥೆಯ ಅನುದಾನದಿಂದ ಜೀವವೈವಿಧ್ಯ ಉದ್ಯಾನ ನಿರ್ಮಾಣವಾಗುತ್ತಿದ್ದು, 600 ಪ್ರಭೇದಗಳ ನಾಲ್ಕೂವರೆ ಸಾವಿರ ಗಿಡಮರಗಳು ಇಲ್ಲಿ ಬೆಳೆದು ನಿಲ್ಲಲಿವೆ.
– ಕೆ.ಬಿ.ಚಂದ್ರಚೂಡ

[…] […]