ತುಮಕೂರು: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ನ ಗ್ರಾಮಾಂತರ ಯೋಜನಾ ಕಚೇರಿ ವ್ಯಾಪ್ತಿಯ ಕೋರ ವಲಯದ ಮೆಳೇಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಥೆಯ ವತಿಯಿಂದ ಗಿಡ ನಾಟಿ ಮತ್ತು ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮವನ್ನು ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಸರೋಜಮ್ಮ ರವರು ಉದ್ಘಾಟಿಸಿದರು.
ಕೃಷಿ ಮೇಲ್ವಿಚಾರಕ ರಾಘವೇಂದ್ರ.ಎನ್ ಕಾರ್ಯಕ್ರಮದ ಪ್ರಾಸ್ತವಿಕ ಮಾಹಿತಿ ನೀಡುತ್ತಾ ಪೂಜ್ಯ ಡಾ||ಡಿ.ವೀರೇಂದ್ರಹೆಗ್ಗಡೆರವರ ಕನಸು ಈ ನಾಡು ಹಸಿರಿನಿಂದ ಕೂಡಿರಬೇಕು,ಈ ನಿಟ್ಟಿನಲ್ಲಿ ಎಲ್ಲರೂ ಪರಿಸರ ರಕ್ಷಣೆಗೆ ಕಂಕಣಬದ್ಧರಾಗಿರಬೇಕೆಂಬುದು ಅವರ ಅಭಿಲಾಷೆ ಆದ್ದರಿಂದ ಎಲ್ಲರೂ ಪರಿಸರ ಉಳಿಸಿ,ಕಾಡು ಬೆಳೆಸಿ ಎಂದು ಕರೆ ನೀಡಿದರು.ಶಿಕ್ಷಕರಾದ ಗಿರೀಶ್ ರವರು ಪರಿಸರ ಜಾಗೃತಿ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರಾದ ಸರೋಜ, ವಲಯ ಮೇಲ್ವಿಚಾರಕಿ ಶ್ರೀಮತಿ ಮಮತ, ಸೇವಾಪ್ರತಿನಿಧಿ ಶ್ರೀಮತಿ ಸೌಮ್ಯ, ಒಕ್ಕೂಟದ ಪದಾಧಿಕಾರಿಗಳು. ಶಾಲಾ ಶಿಕ್ಷಕರು ಪ್ರಗತಿಬಂಧು ಹಾಗೂ ಸ್ವಸಹಾಯ ಸಂಘದ ಸದಸ್ಯರು ಶಾಲಾ ಮಕ್ಕಳು ಉಪಸ್ಥಿತರಿದ್ದರು.
– ಚಂದ್ರಚೂಡ ಕೆ.ಬಿ.
