ತುಮಕೂರು: ನಗರದ ಕನ್ನಡ ಭವನದಲ್ಲಿ ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮ ಹಾಗೂ ಹಾಲಪ್ಪ ಪ್ರತಿಷ್ಠಾನದ ವತಿಯಿಂದ ತುಮಕೂರು ಜಿಲ್ಲಾ ದಿನಪತ್ರಿಕೆ ವಿತರಕರ ಸಂಘದ ಕೋರಿಕೆ ಮೇರೆಗೆ ನಗರದ ಪತ್ರಿಕೆ ವಿತರಕರಿಗೆ ಜರ್ಕೀನ್ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ ಸ್ವಾಮಿ ಜಪಾನಂದಜೀ ಮಹಾರಾಜ್, ಪ್ರಜಾಪ್ರಗತಿ ಸಂಪಾದಕ ಡಾ.ಎಸ್.ನಾಗಣ್ಣ, ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಯ್ಯ, ರಾಜ್ಯ ಪತ್ರಿಕಾ ವಿತರಕ ಸಂಘದ ಅಧ್ಯಕ್ಷ ಶಂಭುಲಿಂಗ, ಜಿಲ್ಲಾಧ್ಯಕ್ಷ ಚೆಲುವರಾಜು (ರಘು), ಕಾರ್ಯದರ್ಶಿ ನಾದೂರು ವಾಸುದೇವ್, ಗೌರವಾಧ್ಯಕ್ಷ ನರಸಿಂಹಯ್ಯ, ಕೃಷ್ಣಪ್ಪ, ಅಭಿಲಾಶ್, ನಟರಾಜು ಮುಂತಾದವರಿದ್ದರು.
– ಕೆ.ಬಿ.ಚಂದ್ರಚೂಡ
