ತುಮಕೂರು: ಮಾನವ ಧರ್ಮಕ್ಕೆ ಜಯವಾಗಲಿ. ಮಾನವ ಧರ್ಮದಿಂದ ವಿಶ್ವಕ್ಕೆ ಶಾಂತಿ, ಧರ್ಮದಿಂದ ಸದೃಢ ಸಮಾಜ ಕಟ್ಟಲು ಸಾಧ್ಯ ಎಂದು ಜಗದ್ಗುರು ರೇಣುಕಾಚಾರ್ಯರು ಸಂದೇಶ ನೀಡಿದರು. ಅವರು ನೀಡಿದ ಸಂದೇಶ ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿದೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಾ ನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ವೀರಶೈವ ಲಿಂಗಾಯತ ಸಮಾಜದ ಎಲ್ಲಾ ಸಂಘ ಸಂಸ್ಥೆ ಗಳ ಆಶ್ರಯದಲ್ಲಿ ಭಾನುವಾರ ನಗರದ ಜಗದ್ಗುರು ರೇಣುಕಾಚಾರ್ಯ ವೃತ್ತ(ಭದ್ರಮ್ಮವೃತ್ತ)ದಲ್ಲಿ ನಡೆದ ಜಗದ್ಗುರು ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕರು, ಸಮಾಜದ ಏಳಿಗೆಗಾಗಿ ಎಲ್ಲರೂ ರೇಣುಕಾಚಾರ್ಯರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕೋರಿದರು.
ನೊಣವಿನಕೆರೆ ಕಾಡಸಿದ್ಧೇಶ್ವರ ಸಂಸ್ಥಾನ ಮಠದ ಡಾ.ಕರಿವೃಷಭ ದೇಶೀಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಸಮಾರಂಭದ ಸಾನಿಧ್ಯವಹಿಸಿ, ಮಾನವ ಧರ್ಮಕ್ಕೆ ಜಯವಾಗಲಿ, ಆ ಮೂಲಕ ವಿಶ್ವದಲ್ಲಿ ಶಾಂತಿ ನೆಲೆಸಲಿ ಎಂಬ ಆಶಯದ ಸಂದೇಶ ನೀಡಿರುವ ರೇಣುಕಾಚಾರ್ಯರು, ಜಗತ್ತಿನ ಎಲ್ಲರೂ ಶಾಂತಿ, ಸೌಹಾರ್ದತೆಯಿಂದ ಬಾಳಬೇಕು. ಭಾವೈಕ್ಯತೆಯಿಂದ ಬಾಳುವುದರೊಂದಿಗೆ ಮಾನವ ಜನ್ಮದ ಶ್ರೇಷ್ಠತೆ ಸಾರಬೇಕು ಎಂದು ಹೇಳಿದ್ದಾರೆ. ಮಹನೀಯರ ಸಂದೇಶಗಳನ್ನು ಎಲ್ಲರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ತುಮಕೂರು ತಹಶೀಲ್ದಾರ್ ಪಿ.ಎಸ್.ರಾಜೇಶ್ವರಿ ಮಾತನಾಡಿ, ವೀರಶೈವ ಸಮಾಜ ಶಿಕ್ಷಣ, ದಾಸೋಹಕ್ಕೆ ಹೆಸರಾಗಿದೆ. ಅದೇ ಪರಂಪರೆ ಮುಂದುವರೆದಿದೆ. ಸಮಾಜದವರು ಎಲ್ಲಾ ಕ್ಷೇತ್ರಗಳಲ್ಲೂ ದೊಡ್ಡ ಕೊಡುಗೆ ನೀಡಿದ್ದಾರೆ. ಅಂತಹ ಸಾಧಕರು ಹಾಕಿಕೊಟ್ಟ ಹಾದಿಯಲ್ಲಿ ಎಲ್ಲರೂ ನಡೆಯೋಣ ಎಂದು ಹೇಳಿದರು.
ಕೆ.ಎಸ್.ಸಿದ್ಧಲಿಂಗಪ್ಪ, ಕೋರಿ ಮಂಜುನಾಥ್, ಟಿ.ಬಿ.ಹರೀಶ್, ಶಶಿಧರನ್, ಜಿ.ಕೆ.ಸ್ವಾಮಿ ಸುರೇಶ್ಕುಮಾರ್, ವೀರಶೈವ ಸಹಕಾರ ಬ್ಯಾಂಕ್ ಅಧ್ಯಕ್ಷ ಕೆ.ಜೆ.ರುದ್ರಪ್ಪ, ಉಪಾಧ್ಯಕ್ಷ ಹೆಬ್ಬಾಕ ಮಲ್ಲಿಕಾರ್ಜುನ್, ಬಿ.ಎಸ್.ಮಂಜುನಾಥ್, ಟಿ.ಆರ್.ಸದಾಶಿವಯ್ಯ, ಟಿ.ಸಿ.ಓಹಿಲೇಶ್ವರ್, ನಾ.ಚಂ.ಗAಗಾಧರ ಶಾಸ್ತಿç, ಜಿ.ಎಸ್.ಸಿದ್ಧರಾಜು, ಜಿ.ಎಸ್.ರವಿಶಂಕರ್, ವಿದ್ಯಾವಾಹಿನಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎನ್.ಬಿ.ಪ್ರದೀಪ್ಕುಮಾರ್, ಟಿ.ಜೆ.ಗಿರೀಶ್,ಡಾ.ದರ್ಶನ್.ಕೆ.ಎಲ್, ಮಮತಾದಿವಾಕರ್, ದರ್ಶನ್,ತರಕಾರಿಮಹೇಶ್ ಸೇರಿದಂತೆ ವಿವಿಧ ಸಂಘ ಸಂಸ್ಥೆ ಗಳ ಪ್ರಮುಖರು ಭಾಗವಹಿಸಿದ್ದರು.
ವರದಿ : ಕೆ ಬಿ ಚಂದ್ರಚೂಡ್
