ತುಮಕೂರು:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ)ವತಿಯಿಂದ ಪರಮಪೂಜ್ಯ ಡಾ||ಡಿವೀರೇಂದ್ರ ಹೆಗ್ಗಡೆ ಹಾಗೂ ಡಾ.ಹೇಮಾವತಿ ವಿ ಹೆಗ್ಗಡೆ ಅವರ ಮಾರ್ಗದರ್ಶನದೊಂದಿಗೆ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ತುಮಕೂರು ಬಿ ವಲಯದ ಖಾದರ್ ನಗರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದ್ದು ಡಾ||ಯಮುನಾ, ಒಕ್ಕೂಟದ ಅಧ್ಯಕ್ಷರಾದ ಅಕ್ತರ್ ಉನ್ನಿಸ, ದಯಾಸ್ಪರ್ಶ್ ಆಸ್ಪತ್ರೆ ಸಿಬ್ಬಂದಿಗಳು ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು.
ಡಾ. ಯಮುನಾರವರು ಮಾತನಾಡುತ್ತಾ ಮಹಿಳೆಯರಲ್ಲಿ ಹೆಚ್ಚಾಗಿ ಕಾಡುತ್ತಿರುವ ಸ್ತನ ಕ್ಯಾನ್ಸರ್ ಗರ್ಭಕಂಠದ ಕ್ಯಾನ್ಸರ್ ಬಾಯಿ ಕ್ಯಾನರ್ ಗಳು ಯಾವ ರೀತಿ ಹರಡುತ್ತವೆ ಅನುಸರಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳೇನು ಎಂಬುದರ ಬಗ್ಗೆ ಮಾಹಿತಿ ನೀಡಿದರು ಮತ್ತು ಈ ಖಾಯಿಲೆ ಗಳಿಗೆ ಎಲ್ಲಾ ಮಹಿಳೆಯರು ಯಾವುದೇ ಮುಜುಗರ ಪಟ್ಟುಕೊಳ್ಳದೆ ಆರಂಭದಲ್ಲಿಯೇ ಚಿಕಿತ್ಸೆ ಪಡೆದರೆ ಗುಣಪಡಿಸಲು ಸಾಧ್ಯ ಎಂಬುದನ್ನು ತಿಳಿಸಿದರು.
ದಯಾಸ್ಪರ್ಶ್ ಆಸ್ಪತ್ರೆಯ ಸಿಬ್ಬಂದಿಯವರು ಬಿಪಿ, ಶುಗರ್, ಕಫ ಮತ್ತು ರಕ್ತ ಪರೀಕ್ಷೆಗಳನ್ನು ಮಾಡಿದರು.ಈ ಸಂದರ್ಭದಲ್ಲಿ ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರೀಮತಿ ರೇಖಾ, ವಲಯದ ಮೇಲ್ವಿಚಾರಕರಾದ ಕುಮಾರಿ ತನುಜಾ, ಸೇವಾಪ್ರತಿನಿಧಿ ಅಮ್ರಿನ್ ಬಾನು, ಸಂಘದ ಸದಸ್ಯರು ಉಪಸ್ಥಿತರಿದ್ದರು.
ವರದಿ : ಕೆ ಬಿ ಚಂದ್ರಚೂಡ್
