ತುಮಕೂರು : ನಗರದ ಸರಸ್ವತಿಪುರಂನ 28ನೇ ವಾರ್ಡ್ನಲ್ಲಿ ಅಮೃತ್-2 ಯೋಜನೆಯಡಿ 9 ಉದ್ಯಾನವನಗಳಿಗೆ ಮಂಜೂರಾಗಿರುವ ಸುಮಾರು 5 ಕೋಟಿ ರೂ. ವೆಚ್ಚದ ಕಾಮಗಾರಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಶಂಕು ಸ್ಥಾಪನೆ ನೆರವೇರಿಸಿದರು. ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ಪಾಲಿಕೆ ಪ್ರಭಾರ ಆಯುಕ್ತ ಯೋಗಾನಂದ್,ಕಾರ್ಯಪಾಲಕ ಅಭಿಯಂತರ ಕೆ.ಎಸ್.ಸಂದೀಪ್ ಪಾಲಿಕೆ ಮಾಜಿ ಸದಸ್ಯ ಧರಣೇಂದ್ರಕುಮಾರ್, ನಾಗರಾಜು ಮತ್ತಿತರರು ಉಪಸ್ಥಿತರಿದ್ದರು.
ವರದಿ : ಕೆ ಬಿ ಚಂದ್ರಚೂಡ್
