ತುಮಕೂರು : ಫೆ.26ರಿಂದ 3ದಿನಗಳ ಕಾಲ ಅಂತರರಾಷ್ಟ್ರೀಯ ಗ್ರಂಥಾಲಯ ಸಮ್ಮೇಳನ.!

ವಿದ್ಯಾರ್ಥಿ, ಸಾರ್ವಜನಿಕರಲ್ಲಿ ಓದುವ ಸಂಸ್ಕೃತಿಯನ್ನು ಬೆಳೆಸುವಲ್ಲಿ ಗ್ರಂಥಾಲಯಗಳ ಪಾತ್ರ ತಿಳಿಸುವುದರ ಜೊತೆಗೆ ನಾಯಕತ್ವ ಅಭಿವೃದ್ಧಿ ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಗ್ರಂಥಾಲಯಗಳು ಹೇಗೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತವೆ ಎಂಬುದರ ಬಗ್ಗೆ ಚರ್ಚೆ ನಡೆಸುವ ಸಂಬಂಧ ವೇದಿಕೆ ಒದಗಿಸುವ ಉದ್ದೇಶ ಇದಾಗಿದೆ.