ತುಮಕೂರು: ಬಾಳೆಹೊನ್ನೂರು ರಂಭಾಪುರಿ ಪೀಠದ ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಜಗದ್ಗುರುಗಳ ಧನುರ್ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಜನಜಾಗೃತಿ ಧರ್ಮ ಸಮಾರಂಭ ಈ ತಿಂಗಳ 22ರಿಂದ 25ರವರೆಗೆ ನಗರದ ಶೆಟ್ಟಿಹಳ್ಳಿ ಮುಖ್ಯರಸ್ತೆಯ ವಿಶಾಲಾಕ್ಷಮ್ಮ ಸದಾಶಿವಯ್ಯ ಸಭಾಭವನದಲ್ಲಿ ಏರ್ಪಾಟಾಗಿದೆ. ಪ್ರತಿದಿನ ಬೆಳಿಗ್ಗೆ 5 ಗಂಟೆಗೆ ಸಾಮೂಹಿಕ ಶಿವ ಪೂಜೆ ಹಾಗೂ ಸಂಜೆ 6.30ಕ್ಕೆ ಧರ್ಮ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟ್ ಅಧ್ಯಕ್ಷ ಟಿ.ಆರ್.ಸದಾಶಿವಯ್ಯ ತಿಳಿಸಿದ್ದಾರೆ.
ಡಿ.22ರಂದು ಸಂಜೆ 6.30ಕ್ಕೆ ರಂಭಾಪುರಿ ಜಗದ್ಗುರುಗಳ ದಿವ್ಯಸಾನಿಧ್ಯದಲ್ಲಿ ನಡೆಯುವ ಧರ್ಮ ಜಾಗೃತಿ ಸಮಾರಂಭವನ್ನು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಉದ್ಘಾಟಿಸುವರು.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ದಿನದರ್ಶಿ ಬಿಡುಗಡೆ ಮಾಡುವರು, ಸಿದ್ಧರಬೆಟ್ಟ ಮಠದ ವೀರಭದ್ರಶಿವಾಚಾರ್ಯ ಸ್ವಾಮೀಜಿ ಉಪದೇಶಾಮೃತ ನೀಡುವರು.
ಎಡೆಯೂರು ಕ್ಷೇತ್ರದ ರೇಣುಕಾ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ಅಂಕನಹಳ್ಳಿ ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಬಾಳೆಹೊನ್ನೂರು ಕ್ಷೇತ್ರದ ರೇಣುಕಾಚಾರ್ಯ ಸ್ವಾಮೀಜಿ, ಅಂಬಲದೇವರಹಳ್ಳಿ ಮಠದ ಉಜ್ಜನೀಶ್ವರ ಶಿವಾಚಾರ್ಯ ಸ್ವಾಮೀಜಿ ಶಾಸಕ ಜಿ.ಬಿ.ಜ್ಯೋತಿಗಣೇಶ್, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಡಾ.ಎಸ್.ಪರಮೇಶ್, ನಗರ ವೀರಶೈವ ಸಮಾಜ ಸೇವಾ ಸಮಿತಿ ಅಧ್ಯಕ್ಷ ಟಿ.ಬಿ.ಹರೀಶ್ ಮೊದಲಾದವರು ಅತಿಥಿಗಳಾಗಿ ಪಾಲ್ಗೊಳ್ಳುವರು.ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗುರುಕೃಪೆಗೆ ಒಳಗಾಗಬೇಕು ಮತ್ತು ಜಗದ್ಗುರುಗಳ ಆಶೀರ್ವಾದ ಪಡೆಯಬೇಕೆಂದು ಟಿ.ಆರ್.ಸದಾಶಿವಯ್ಯ ಮನವಿ ಮಾಡಿದ್ದಾರೆ.
– ಕೆ.ಬಿ.ಚಂದ್ರಚೂಡ
