ತುಮಕೂರು: ಉದ್ಯೋಗ ಸೃಷ್ಟಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ದೀರ್ಘ ಕಾಲದ ಸೌಕರ್ಯಗಳನ್ನು ಒದಗಿಸುವ ಗುರಿ ಹೊಂದಿರುವ ವಿಕಸಿತ ಭಾರತ-ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ವಿಬಿ-ಜಿ ರಾಮ್ ಜಿ) ಯೋಜನೆ ಬಗ್ಗೆ ಕಾಂಗ್ರೆಸ್ ಸರ್ಕಾರ ಅಪಪ್ರಚಾರ ಮಾಡುತ್ತಾ ಜನರನ್ನು ದಿಕ್ಕತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ಡಾ.ಸಿ.ಅಶ್ವತ್ಥನಾರಾಯಣ ಆರೋಪಿಸಿದರು.
ನ್ಯೂನ್ಯತೆ ಸರಿಪಡಿಸಿ ಯೋಜನೆಯನ್ನು ಉತ್ತಮಪಡಿಸಿ ಗ್ರಾಮೀಣ ಪ್ರದೇಶಗಳಲ್ಲಿ ಮುಖ್ಯವಾಗಿ ನೀರಿನ ಕೊರತೆ ನೀಗಿಸುವ ಕೆಲಸಗಳು, ಮೂಲಸೌಕರ್ಯಗಳು, ದೈನಂದಿನ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಹಾಗೂ ಪ್ರಕೃತಿ ವಿಕೋಪಗಳನ್ನು ತಗ್ಗಿಸುವ ಕ್ರಮಗಳ ಜಾರಿಗೆ ಜಿ ರಾಮ್ ಜಿ ಯೋಜನೆಯಲ್ಲಿ ಒತ್ತು ನೀಡಲಾಗಿದೆ. ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಕೈಗೊಳ್ಳುವ ಈ ಯೋಜನೆಯಲ್ಲಿ 60:40ರ ಅನುಪಾತದಲ್ಲಿ ಕೇಂದ್ರ ಸರ್ಕಾರದ ಶೇಕಡ 60 ಹಾಗು ರಾಜ್ಯ ಸರ್ಕಾರದ ಶೇಕಡ 40ರಷ್ಟು ಅನುದಾನ ಭರಿಸಬೇಕಾಗಿದೆ ಎಂದರು.
ಇದನ್ನು ಓದು: ತುಮಕೂರು: ವಿಕಲಚೇತನರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಇಕ್ಬಾಲ್ ಅಹ್ಮದ್ ಒತ್ತಾಯ
ಕೇಂದ್ರ ಸರ್ಕಾರ ಮಂಡಿಸಿರುವ ಈ ಮಸೂದೆಯಲ್ಲಿ ವರ್ಷದಲ್ಲಿ 100 ದಿನಗಳ ಕೆಲಸದ ಅವಧಿಯನ್ನು 125 ದಿನಕ್ಕೆ ಹೆಚ್ಚಿಸಲಾಗಿದೆ. ಮನರೇಗಾದಲ್ಲಿ ಕೇಂದ್ರ ಸರ್ಕಾರ ಶೇಕಡ 100ರಷ್ಟು ಜತೆಗೆ ಶೇಕಡ 75ರಷ್ಟು ಸಾಮಗ್ರಿಗಳ ವೆಚ್ಚವನ್ನು ಭರಿಸುತ್ತಿತ್ತು. ರಾಜ್ಯ ಸರ್ಕಾರ ಕೇವಲ ನಿರುದ್ಯೋಗ ಭತ್ಯೆ ಮತ್ತು ಶೇಕಡ ಕಚ್ಚಾ ವಸಸ್ತುಗಳ ವೆಚ್ಚವನ್ನು ಭರಿಸುತ್ತಿತ್ತು. ಜಿ ರಾಮ್ ಜೀ ಯೋಜನೆಯಲ್ಲಿ ವೇತನ ಮತ್ತು ಸಾಮಗ್ರಿಗಳಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ 60:40 ಅನುಪಾತದಲ್ಲಿ ವೆಚ್ಚ ಭರಿಸಬೇಕು ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.
ಗ್ರಾಮೀಣ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ, ಆಸ್ತಿ ನಿರ್ಮಾಣ, ಮೌಲ್ಯವರ್ಧನೆಗೆ ಆದ್ಯತೆ ನೀಡುವ ಈ ಯೋಜನೆ ಬಗ್ಗೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿದ ಅವರು, ಈ ಯೋಜನೆಯ ಮಹತ್ವ ಹಾಗೂ ಉಪಯೋಗದ ಬಗ್ಗೆ ಬಿಜೆಪಿ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.
ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಎಚ್.ಎಸ್.ರವಿಶಂಕರ್ ವೈ.ಹೆಚ್.ಹುಚ್ಚಯ್ಯ, ಗಂಗರಾಜು, ಸಂದೀಪ್ಗೌಡ, ಜಿಲ್ಲಾ ಕಾರ್ಯದರ್ಶಿ ಹೆಚ್.ಎಂ.ರವೀಶಯ್ಯ, ಟಿ.ಕೆ.ಧನುಷ್, ಜಿಲ್ಲಾ ವಕ್ತಾರ ಟಿ.ಆರ್.ಸದಾಶಿವಯ್ಯ, ಗಣೇಶ್ಪ್ರಸಾದ್, ರಾಜಶೇಖರ್, ಜೆ.ಜಗದೀಶ್, ಹನುಮಂತರಾಜು ಮೊದಲಾದವರು ಹಾಜರಿದ್ದರು.
– ಕೆ.ಬಿ.ಚಂದ್ರಚೂಡ

[…] ಇದನ್ನು ಓದು: ತುಮಕೂರು: ಜಿ ರಾಮ್ ಜಿ ಅಪಪ್ರಚಾರ: ಕಾಂಗ್ರೆಸ… […]
[…] ಇದನ್ನು ಓದು: ತುಮಕೂರು: ಜಿ ರಾಮ್ ಜಿ ಅಪಪ್ರಚಾರ: ಕಾಂಗ್ರೆಸ… […]