ತುಮಕೂರು: ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ 71ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ, ಮೆಳೇಹಳ್ಳಿ ಗ್ರಾಮದ ಪತ್ರಕರ್ತ ಎಂ.ಇ. ಕುಮಾರಸ್ವಾಮಿ ಅವರಿಗೆ ತಾಲ್ಲೂಕು ಆಡಳಿತದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಯೋಗೀಶ್ ಹಾಗೂ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಚಿ.ನಿ. ಪುರುಷೋತ್ತಮ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ವರದಿ : ಕೆ ಬಿ ಚಂದ್ರಚೂಡ್
