ತುಮಕೂರು: ಗೌರವಾನ್ವಿತ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ನವೆಂಬರ್ 14, 15, 21 ಹಾಗೂ 29ರಂದು ತುಮಕೂರು ಜಿಲ್ಲೆಗೆ ಭೇಟಿ ನೀಡಲಿದ್ದು, ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿ ತನಿಖೆಗೆ ಬಾಕಿ ಇರುವ ಪ್ರಕರಣಗಳ ವಿಚಾರಣಾ ಸಭೆ ನಡೆಸಲಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನವೆಂಬರ್ 14 ಮತ್ತು 15ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲೆಯ ಗುಬ್ಬಿ ಹಾಗೂ ಕುಣಿಗಲ್ ತಾಲ್ಲೂಕುಗಳ ಬಾಕಿ ಇರುವ ಇಲಾಖೆಗಳ ಪ್ರಕರಣಗಳ ವಿಚಾರಣೆ/ವಿಲೇವಾರಿ ಸಭೆ ನಡೆಯಲಿದೆ.
ಮಧುಗಿರಿಯ ಕನ್ನಡ ಭವನದಲ್ಲಿ ನವೆಂಬರ್ 21ರಂದು ಬೆಳಿಗ್ಗೆ 10 ಗಂಟೆಗೆ ಮಧುಗಿರಿ, ಪಾವಗಡ ಹಾಗೂ ಶಿರಾ ತಾಲ್ಲೂಕುಗಳ ಹಾಗೂ ತಿಪಟೂರಿನ ಕಲ್ಪತರು ತಾಂತ್ರಿಕ ಸಂಸ್ಥೆಯ ಕೆ.ಐ.ಟಿ. ಆಡಿಟೋರಿಯಂನಲ್ಲಿ ನವೆಂಬರ್ 29ರಂದು ಬೆಳಿಗ್ಗೆ 10 ಗಂಟೆಗೆ ತಿಪಟೂರು, ಚಿಕ್ಕನಾಯಕನಹಳ್ಳಿ, ತುರುವೇಕೆರೆ ತಾಲ್ಲೂಕುಗಳ ಬಾಕಿ ಇರುವ ಇಲಾಖೆಗಳ ಪ್ರಕರಣಗಳ ವಿಚಾರಣೆ/ವಿಲೇವಾರಿ ಸಭೆ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ಕೆ ಬಿ ಚಂದ್ರಚೂಡ್
