ತುಮಕೂರು : ನಗರಕ್ಕೆ ಆಗಮಿಸಿದ್ದ ಉಪಲೋಕಾಯುಕ್ತರು ಮತ್ತು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರೂ ಆದ ಕೆ.ಎನ್.ಫಣೀಂದ್ರರವರನ್ನು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಹೆಚ್.ಕೆಂಪರಾಜಯ್ಯ,ಪ್ರಧಾನ ಕಾರ್ಯದರ್ಶಿ ಮಹೇಶ್ ಹಿರೇಹಳ್ಳಿ, ಖಜಾಂಚಿ ಸಿಂಧು.ಬಿ.ಎ.ರವರು ಆತ್ಮೀಯವಾಗಿ ಸ್ವಾಗತಿಸಿದರು.ಈ ಸಂದರ್ಭದಲ್ಲಿ ನಿವೃತ್ತ ನ್ಯಾಯಮೂರ್ತಿಗಳಾದ.ಹೆಚ್.ಎಸ್.ಕೆಂಪಣ್ಣ,ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಯಂತ್ ಕುಮಾರ್,ನ್ಯಾಯಾಧೀಶರಾದ ಮೋಹನ್ ಇತರರು ಉಪಸ್ಥಿತರಿದ್ದರು.
ವರದಿ : ಕೆ ಬಿ ಚಂದ್ರಚೂಡ್
