ತುಮಕೂರು: ನಗರದ ಚಿಕ್ಕಪೇಟೆಯ ಶ್ರೀ ಕಾಳಿಕಾಂಬ ಪತ್ತಿನ ಸಹಕಾರ ಸಂಘದ ಸಂಸ್ಥಾಪನಾ ದಿನದ ಅಂಗವಾಗಿ, ಸಂಘದ ಆವರಣದಲ್ಲಿ ಸದಸ್ಯರಿಗಾಗಿ ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಹಾಗೂ ಗುರುಕುಲ ಕ್ಲೀನಿಕ್ ಸಹಯೋಗದಲ್ಲಿ ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ರಾಜ್ಯ ಚೆಸ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಪ್ರಜಾಪ್ರಗತಿ ದಿನಪತ್ರಿಕೆಯ ಉಪಸಂಪಾದಕರಾದ ಟಿ.ಎನ್. ಮಧುಕರ್, ಸ್ವಾಮಿ ವಿವೇಕಾನಂದ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಪಿ. ಮೂರ್ತಿ, ಕಾಳಿಕಾಂಬ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಎಚ್. ಹರೀಶ್ ಆಚಾರ್ಯ, ಉಪಾಧ್ಯಕ್ಷರಾದ ಗೋಪಾಲಕೃಷ್ಣಾಚಾರ್, ಸಂಘದ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
