ತುಮಕೂರು:ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರ ಅಭಿಮಾನಿಗಳು, ಹಿತೈಷಿಗಳು, ಸಹಕಾರ ಕ್ಷೇತ್ರದ ಮುಖಂಡರುಗಳು ಕೆ.ಎನ್.ಆರ್ ಅವರಿಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೇ.13 ರಂದು ಆಯೋಜಿಸಿದ್ದ ಅಮೃತ ಮಹೋತ್ಸವ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭವನ್ನು,ದೇಶದಲ್ಲಿ ಯುದ್ದದ ಕಾರ್ಮೋಡ ಕವಿದಿರುವ ಹಿನ್ನೆಲೆಯಲ್ಲಿ ಭಾರತದ ಸೈನಿಕರಿಗೆ ಬೆಂಬಲವಾಗಿ ನಿಲ್ಲುವ ಉದ್ದೇಶದಿಂದ ಮುಂದೂಡಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಕಾಶ್ಮೀರದ ಪೆಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಯ ಪ್ರತಿಕಾರವಾಗಿ ಭಾರತ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿರುವುದು ಪಾಕಿಸ್ತಾನ ಮತ್ತು ಭಾರತದ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿದೆ.ಎರಡು ದೇಶಗಳ ನಡುವೆ ನಡೆಯುತ್ತಿರುವ ಕ್ಷಿಪಣಿ ಮತ್ತು ಯುದ್ಧ ವಿಮಾನಗಳ ಶೆಲ್ ದಾಳಿಯಿಂದ ಉಗ್ರರ ನೆಲೆಗಳು ದ್ವಂಸಗೊಂಡಿವೆ. ಇಂತಹ ಸಂದರ್ಭದಲ್ಲಿ ಭಾರತೀಯರೆಲ್ಲರೂ ಸೈನಿಕರೊಂದಿಗೆ ನಿಲ್ಲಬೇಕಾಗಿದೆ. ಹಾಗಾಗಿ ಮೇ.13ರ ಕಾರ್ಯಕ್ರಮವನ್ನು ಮುಂದೂಡಿದ್ದು,ದೇಶದಲ್ಲಿ ವಾತಾವರಣ ತಿಳಿಗೊಂಡ ನಂತರಕಾರ್ಯಕ್ರಮದ ಮುಂದಿನ ದಿನಾಂಕವನ್ನು ಅಭಿನಂದನಾ ಸಮಿತಿ ತಿಳಿಸಲಿದೆ ಎಂದರು.
ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾಧಕರು ದಾಳಿ ನಡೆಸಿದ್ದಾರೆ.ಭಯೋತ್ಪಾಧಕರಿಗೆ ಜಾತಿ, ಧರ್ಮಎಂಬುದುಇಲ್ಲ.ಹಾಗಾಗಿ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಹೀಯಾಳಿಸುವುದು ತರವಲ್ಲ.ಈ ಹಿಂದೆರಾಷ್ಟ್ಪಪಿತ ಮಹಾತ್ಮಗಾಂಧಿಅವರನ್ನುಕೊಂದಿದ್ದು ಸಹ ಓರ್ವ ವ್ಯಕ್ತಿ, ಆದರೆಅಂದು ಕೊಲೆ ಮಾಡಿದ ವ್ಯಕ್ತಿಯನ್ನು ಮಾತ್ರಅಪರಾದಿ ಎಂದುತೀರ್ಮಾನಿಸಲಾಯಿತೇ ಹೊರತು, ಆತನ ಧರ್ಮ ಮತ್ತು ಸಮುದಾಯವನ್ನಲ್ಲ. ಇಂದಿರಾಗಾಂಧಿ ಅವರಿಗೆ ಅವರ ಅಂಗ ರಕ್ಷಕರೇ ಗುಂಡಿಟ್ಟು ಕೊಂದಾಗ, ಗುಂಡಿಟ್ಟ ವ್ಯಕ್ತಿಗಳ ಸಮುದಾಯವನ್ನು ಅಪರಾಧಿ ಎಂಬಂತೆ ಜನತೆ ನಡೆದುಕೊಳ್ಳಲಿಲ್ಲ. ಈ ಘಟನೆಯಲ್ಲಿಯೂ ಒಂದು ಸಮುದಾಯವನ್ನುಗುರಿಯಾಗಿಸುವುದು ಭಾರತದಂತಹ ಬಹುಸಂಸ್ಕೃತಿಯ ನಾಡಿಗೆತರವಲ್ಲಎಂದುಆರ್.ರಾಜೇಂದ್ರ ನುಡಿದರು.
ಮೇ.13 ರಂದುಕೆ.ಎನ್.ಆರ್. ಅವರ 75ನೇ ವರ್ಷದಅಮೃತಮಹೋತ್ಸವ ಮತ್ತು ಅಭಿನಂದನಾ ಗ್ರಂಥ ಬಿಡುಗಡೆಗೆ ಸಕಲ ಸಿದ್ಧತೆಗಳನ್ನು ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದಿತ್ತು. ರಾಜ್ಯದ ಮೂಲೆ ಮೂಲೆಗಳಿಂದ ಸುಮಾರು 1.50 ಲಕ್ಷ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇತ್ತು.ಅದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಅಭಿನಂದನಾ ಸಮಿತಿ ಮತ್ತು ಕೆ.ಎನ್.ಆರ್.ಅಭಿಮಾನಿಗಳು, ಹಿತೈಷಿಗಳು ಮಾಡಿಕೊಂಡಿದ್ದರು.ಆದರೆ ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಇದ್ದಾಗ,ಇಂತಹ ಅದ್ದೂರಿಯ ಕಾರ್ಯಕ್ರಮ ಮಾಡಿದರೆ ಅದು ಜನರಿಗೆ ಬೇರೆಯದೆ ಸಂದೇಶ ನೀಡಿದಂತಾಗುತ್ತದೆ. ಹಾಗಾಗಿ ಪರಿಸ್ಥಿತಿ ತಿಳಿಯಾಗುವವರೆಗೂ ಕಾಯ್ದು, ತದನಂತರ ಸಚಿವರುಗಳಿಗೆ ಮನವರಿಕೆ ಮಾಡಿಕೊಟ್ಟಿದ್ದೆವೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರುಗಳು ಒಪ್ಪಿಗೆ ಸೂಚಿಸಿದ್ದಾರೆ ಎಂದು ಆರ್.ರಾಜೇಂದ್ರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಅಭಿನಂದನಾ ಸಮಿತಿ ಮುರುಳಿ ಕೃಷ್ಣ, ಎನ್.ಗೋವಿಂದರಾಜು, ಗಂಗಣ್ಣ, ಕೆ.ಎ.ದೇವರಾಜು, ಧನಿಯಕುಮಾರ್, ಲಕ್ಷ್ಮಿ ನಾರಾಯಣ್, ಕೊಟ್ಟಶಂಕರ್, ಪಿ.ಮೂರ್ತಿ, ನಾರಾಯಣಗೌಡ, ಟಿ.ಪಿ.ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
